ಮನೆ ರಾಷ್ಟ್ರೀಯ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಏರ್ ಇಂಡಿಯಾ ಸಂಸ್ಥೆಗೆ 30 ಲಕ್ಷ ದಂಡ

ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಏರ್ ಇಂಡಿಯಾ ಸಂಸ್ಥೆಗೆ 30 ಲಕ್ಷ ದಂಡ

0

ಹೊಸದಿಲ್ಲಿ: ದೇಶದಲ್ಲಿ ಸಂಚಲನ ಮೂಡಿಸಿದ್ದ ವಿಮಾನದೊಳಗೆ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ 30 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಅಲ್ಲದೆ ಕರ್ತವ್ಯ ಲೋಪಕ್ಕೆ ಪೈಲಟ್ ಅವರನ್ನು ಮೂರು ತಿಂಗಳವರೆಗೆ ಅಮಾನತು ಮಾಡಲಾಗಿದೆ.

ಏರ್ ಇಂಡಿಯಾದ ವಿಮಾನಯಾನ ಸೇವೆಗಳ ನಿರ್ದೇಶಕರ ಮೇಲೂ  3 ಲಕ್ಷ ದಂಡ ವಿಧಿಸಲಾಗಿದೆ.

2022 ನವೆಂಬರ್ 26ರಂದು ನ್ಯೂಯಾರ್ಕ್‌’ನಿಂದ ದೆಹಲಿಗೆ ಬರುತ್ತಿದ್ದ ವಿಮಾನದ ಬ್ಯುಸಿನೆಸ್ ಕ್ಲಾಸ್‌’ನಲ್ಲಿ ಈ ಘಟನೆ ನಡೆದಿತ್ತು. ಕುಡಿತದ ಮತ್ತಿನಲ್ಲಿದ್ದ ಮುಂಬೈ ಮೂಲದ ಉದ್ಯಮಿ ಶಂಕರ್ ಮಿಶ್ರಾ, ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ್ದ.