ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಂತೆ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಷಡ್ಯಂತ್ರ ಆರಂಭಿಸಿದ್ದಾರೆ ಎಂದು ತೆಲಂಗಾಣದ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಹೇಳಿಕೆ ಕುರಿತು ರಾಜ್ಯದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.
ಇದರ ಬೆನ್ನಲ್ಲೇ ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕ ಜಮೀರ್ ಅಹಮದ್ ಖಾನ್ ಇಲ್ಲಿನ ಬನ್ನಿಮಂಟಪದಲ್ಲಿರುವ ಖಾಸಗಿ ಹೋಟೆಲ್’ನಲ್ಲಿ ಶುಕ್ರವಾರ ರಾತ್ರಿ ಗೌಪ್ಯ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಪ್ರತಿಕ್ರಿಯೆ ಪಡೆಯಲು ಬಂದ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ಸಿದ್ದರಾಮಯ್ಯ ಗರಂ ಆದರು.
ಖಾಸಗಿ ಸಭೆಗಳಿಗೆಲ್ಲಾ ಬರುತ್ತೀರೇಕೆ. ತೆಲಂಗಾಣದ ಅಧ್ಯಕ್ಷರ ಹೇಳಿಕೆ ಬಗ್ಗೆ ಇಲ್ಲಿ ಯಾರೂ ಮಾತನಾಡುವುದಿಲ್ಲ. ನೀವೆಲ್ಲರೂ ಹೋಗಿ ಎಂದು ಹೊರ ಕಳುಹಿಸಿದರು.
ನನಗಂತೂ ಯಾವುದೇ ಆಫರ್ ಬಂದಿಲ್ಲ:
ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಜಮೀರ್, ನನಗಂತೂ ಯಾವುದೇ ಆಫರ್ ಬಂದಿಲ್ಲ. ನಾನು ಅಲ್ಲಿಗೆ ಹೋಗಿದ್ದು, ತೆಲಂಗಾಣ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದು ಸತ್ಯ. ಆದರೆ, 500 ಕೋಟಿ ಆಫರ್ ಅನ್ನು ಯಾರೂ ನನಗೆ ಕೊಟ್ಟಿಲ್ಲ. ಆ ಬಗ್ಗೆ ಗೊತ್ತೂ ಇಲ್ಲ. ಅಲ್ಲಿನ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ನನಗೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿಸಿದ್ದರು. ಅದು ಸೌಜನ್ಯದ ಭೇಟಿಯಾಗಿತ್ತು ಎಂದರು.
ನಮ್ಮ ಭೇಟಿಯಲ್ಲಿ ರಾಜಕೀಯದ ಚರ್ಚೆ ನಡೆದಿಲ್ಲ. ಅವರ ಪಕ್ಷವೇ ಬೇರೆ, ನಮ್ಮದೇ ಬೇರೆ. 500 ಕೋಟಿಯನ್ನು ಯಾರು ಪಡೆದಿದ್ದಾರೆ ಎನ್ನುವುದನ್ನು ಆರೋಪ ಮಾಡಿದವರನ್ನೇ ಕೇಳಿ. ನಾನು ಭೇಟಿಯಾದ ತಕ್ಷಣ ಏನೇನೋ ಹಬ್ಬಿಸುತ್ತಾರೆ. ಆರೋಪ ಮಾಡಿದವರು ನನ್ನ ಹೆಸರನ್ನು ನಿರ್ದಿಷ್ಟವಾಗಿ ಹೇಳಿಲ್ಲ. ಹೀಗಾಗಿ ಯಾವುದೇ ಕ್ರಮದ ಬಗ್ಗೆ ಯೋಚಿಸಿಲ್ಲ. ನನ್ನ ಬಗ್ಗೆ ಮಾಧ್ಯಮದಲ್ಲಿ ಹೆಚ್ಚು ಚರ್ಚೆ ಆಗುತ್ತಿದೆಯಷ್ಟೆ ಎಂದು ಪ್ರತಿಕ್ರಿಯಿಸಿದರು.