ಮನೆ ರಾಜ್ಯ ವಿಜಯಪುರ ಜ್ಞಾನ ಯೋಗಾಶ್ರಮಕ್ಕೆ ಜೆ.ಪಿ.ನಡ್ಡಾ ಭೇಟಿ

ವಿಜಯಪುರ ಜ್ಞಾನ ಯೋಗಾಶ್ರಮಕ್ಕೆ ಜೆ.ಪಿ.ನಡ್ಡಾ ಭೇಟಿ

0

ವಿಜಯಪುರ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿಜಯಪುರ ಜ್ಞಾನ ಯೋಗಾಶ್ರಮಕ್ಕೆ ಭೇಟಿ ನೀಡಿ ಲಿಂಗೈಕ್ಯ ಸಿದ್ದೇಶ್ವರ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಶ್ರದ್ಧಾಂಜಲಿ ಸಲ್ಲಿಸಿದರು.

ಸಿದ್ದೇಶ್ವರ ಶ್ರೀ ರಚಿತ ಪತಂಜಲಿ ಯೋಗ ಸೂತ್ರ, ನಾರದ ಸೂತ್ರ ಮತ್ತು ಶಿವ ಸೂತ್ರ ಪುಸ್ತಕಗಳನ್ನು ನಡ್ಡಾ ಅವರಿಗೆ ಆಶ್ರಮದ ಅಧ್ಯಕ್ಷರಾದ ಬಸವಲಿಂಗ ಸ್ವಾಮೀಜಿ ನೀಡಿದರು.

ನಂತರ ನಾಗಠಾಣ ಮತಕ್ಷೇತ್ರ ವ್ಯಾಪ್ತಿಯ ವಿಜಯಪುರ ಮಹಾನಗರ ಪಾಲಿಕೆ ವಾರ್ಡ್ ನಂಬರ್ 12 ರಲ್ಲಿ ಮನೆ ಮನೆ ಭೇಟಿ ನೀಡಿ, ಬೂತ್ ವಿಜಯ ಸಂಕಲ್ಪ ಅಭಿಯಾನ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು.

ವಾರ್ಡ್ ನಂಬರ್ 10 ರಲ್ಲಿ ಗೋಡೆ ಬರಹ‌ ಹಾಗೂ ಫಲಾನುಭವಿಗಳ ಮನೆಗೆ ಭೇಟಿ‌ ನೀಡಿ ಸಂವಾದ ನಡೆಸಿದರು.

ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಅಶ್ವತ್ಥ ನಾರಾಯಣ, ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಮುಖಂಡರಾದ ಗೋಪಾಲ ಕಾರಜೋಳ, ಉಮೇಶ ಕಾರಜೋಳ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಂಸದ ರಮೇಶ ಜಿಗಜಿಣಗಿ ಇದ್ದರು.ವಿಜಯಪುರ ಕಾರ್ಯಕ್ರಮ ಮುಗಿಸಿ, ಸಿಂದಗಿಗೆ ತೆರಳಿದರು.