ಮನೆ ರಾಷ್ಟ್ರೀಯ ಅನುಮತಿ ಪಡೆಯದೇ ಹೈದರಾಬಾದ್ ವಿವಿ ಕ್ಯಾಂಪಸ್’ನಲ್ಲಿ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್‌’ ಸಾಕ್ಷ್ಯಚಿತ್ರ ಪ್ರದರ್ಶನ

ಅನುಮತಿ ಪಡೆಯದೇ ಹೈದರಾಬಾದ್ ವಿವಿ ಕ್ಯಾಂಪಸ್’ನಲ್ಲಿ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್‌’ ಸಾಕ್ಷ್ಯಚಿತ್ರ ಪ್ರದರ್ಶನ

0

ನವದೆಹಲಿ: ತೀವ್ರ ವಿವಾದಕ್ಕೆ ಕಾರಣವಾಗಿರುವು ಬಿಬಿಸಿ ಸಂಸ್ಥೆ ನಿರ್ಮಿಸಿರುವ ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಿತ ಸಾಕ್ಷ್ಯಚಿತ್ರ‘ಇಂಡಿಯಾ: ದಿ ಮೋದಿ ಕ್ವೆಶ್ಚನ್‌’ ವನ್ನು ಹೈದರಾಬಾದ್ ವಿಶ್ವವಿದ್ಯಾಲಯದ ಕೆಲ ವಿದ್ಯಾರ್ಥಿಗಳು ವಿವಿ ಕ್ಯಾಂಪಸ್‌ನಲ್ಲಿ ಸಾರ್ವಜನಿಕವಾಗಿ ಪ್ರದರ್ಶಿಸಿದ್ದಾರೆ.

ಅನುಮತಿ ಪಡೆಯದೇ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿರುವುದಕ್ಕೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಭದ್ರತಾ ಅಧಿಕಾರಿಯಿಂದ ವರದಿ ಕೇಳಿದೆ.

ವಿವಿಯ ವಿಭಾಗವೊಂದರ ಕೆಲ ವಿದ್ಯಾರ್ಥಿಗಳು ವಿವಿ ಆಡಳಿತ ಮಂಡಳಿ ಅಥವಾ ಸಂಬಂಧಿಸಿದವರ ಗಮನಕ್ಕೆ ತಾರದೇ ಭಾತೃತ್ವ ಚಳವಳಿ ಹೆಸರಿನಲ್ಲಿ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್‌ ಸಾಕ್ಷ್ಯಚಿತ್ರವನ್ನು’ ಪ್ರದರ್ಶಿಸಿದ್ದಾರೆ ಎಂದು ದೂರಲಾಗಿದೆ.

ಈ ಕುರಿತು ವಿವಿ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ವಿವಿ ವಿರುದ್ಧ ಎಬಿವಿಪಿ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ.

2002ರಲ್ಲಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನಡೆದಿದ್ದ ಗೋಧ್ರೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತಹ ಕೆಲವು ವಿಷಯಗಳ ತನಿಖೆಯ ವಿಷಯವಿದು ಎಂದು ಎರಡು ಕಂತಿನ ಸಾಕ್ಷ್ಯಚಿತ್ರದಲ್ಲಿ ಹೇಳಲಾಗಿದೆ.

ಈ ಹಿಂದೆ ಜನವರಿ 24 ರಂದು ಜೆಎನ್ ಯು ವಿಶ್ವವಿದ್ಯಾಲಯ ಆವರಣದಲ್ಲೂ ಇಂತಹುದೇ ಪ್ರಯತ್ನ ನಡೆದಿದೆ. ಆದರೆ ಪೊಲೀಸರ ಮಧ್ಯಪ್ರವೇಶದಿಂದಾಗಿ  ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ. ಪೊಲೀಸರ ಕ್ರಮಕ್ಕೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಇಂತಹ ಅನಧಿಕೃತ ಚಟುವಟಿಕೆ ವಿಶ್ವವಿದ್ಯಾನಿಲಯದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಬಹುದು ಎಂದು ಜೆಎನ್‌ಯು ಆಡಳಿತ ಹೇಳಿದೆ.