ಮನೆ ಅಪರಾಧ ಮದ್ದೂರು ತಾಲ್ಲೂಕು ಕಚೇರಿ ಆವರಣದಲ್ಲಿ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ಮದ್ದೂರು ತಾಲ್ಲೂಕು ಕಚೇರಿ ಆವರಣದಲ್ಲಿ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

0

ಮಂಡ್ಯ(Mandya): ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಕುಡುಗೋಲಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮದ್ದೂರು ತಾಲೂಕು ಕಚೇರಿ ಆವರಣದಲ್ಲಿ ನಡೆದಿದೆ.

ಮದ್ದೂರು ತಾಲೂಕಿನ ಮರಳಿಗ ಗ್ರಾಮದ ಚನ್ನರಾಜು ಅಲಿಯಾಸ್ ಚಾಟಿ ಹಲ್ಲೆಗೊಳಗಾದವರು.

ಇದೇ ಗ್ರಾಮದ ನಂದನ್ ಕುಮಾರ್​ ಹಲ್ಲೆ ಮಾಡಿದ ಆರೋಪಿ.

ಈ ಇಬ್ಬರ ನಡುವೆ ಜಮೀನು ವಿಚಾರವಾಗಿ ವೈಷಮ್ಯ ಇತ್ತು. ಈ ಹಿನ್ನೆಲೆ ಆರೋಪಿಯು ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಇನ್ನು ಗಂಭೀರವಾಗಿ ಗಾಯಗೊಂಡಿರುವ ಚನ್ನರಾಜುವನ್ನು ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಗೆ ದಾಖಲಿಸಲಾಗಿದೆ.

ಹಲ್ಲೆ ನಡೆಸಿದ ನಂದನ್ ಕುಮಾರ್’​ಗೆ ಸ್ಥಳೀಯರು ಥಳಿಸಿದ್ದು, ಆತನಿಗೂ ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಮದ್ದೂರು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.