ಮನೆ ರಾಜಕೀಯ ಜ.28 ರಂದು ಕುಂದಗೋಳದಲ್ಲಿ ರೋಡ್ ಶೋ ನಡೆಸಲಿರುವ ಅಮಿತ್ ಶಾ

ಜ.28 ರಂದು ಕುಂದಗೋಳದಲ್ಲಿ ರೋಡ್ ಶೋ ನಡೆಸಲಿರುವ ಅಮಿತ್ ಶಾ

0

ಹುಬ್ಬಳ್ಳಿ(Hubballi): ಜ. 28ರಂದು ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ. 27ಕ್ಕೆ ಹುಬ್ಬಳ್ಳಿಗೆ ಬಂದು ವಾಸ್ತವ್ಯ ಹೂಡಲಿರುವ ಶಾ ಅವರು ಬೆಳಿಗ್ಗೆ ಕೆಎಲ್’ಇ ಸಂಸ್ಥೆಯ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ, ಧಾರವಾಡದಲ್ಲಿ ವಿಧಿವಿಜ್ಞಾನ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸುವರು ಎಂದರು.

ಮಧ್ಯಾಹ್ನ 1.30ಕ್ಕೆ ಕುಂದಗೋಳಕ್ಕೆ ಭೇಟಿ ನೀಡಲಿರುವ ಅವರು, ಪಟ್ಟಣದ ಶಂಭು ಲಿಂಗೇಶ್ವರ ದೇವಸ್ಥಾನಕ್ಕೆ ಪೂಜೆ ಸಲ್ಲಿಸುವರು. ಬಳಿಕ ಅವರು, ಪಕ್ಷದ ವಿಜಯ ಸಂಕಲ್ಪ ಯಾತ್ರೆಯ ಭಾಗವಾಗಿ ಒಂದು‌ ಕಿಲೋಮೀಟರ್ ರೋಡ್ ಶೋ ನಡೆಸಲಿದ್ದಾರೆ. ಚುನಾವಣಾ ಪ್ರಚಾರದ ಗೋಡೆ ಬರಹ ಮತ್ತು ಮನೆಮನೆಗೆ ಕರಪತ್ರಗಳನ್ನು ಹಂಚುವ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ನಂತರ, ಬೆಳಗಾವಿ ಜಿಲ್ಲೆಯ ಎಂ.ಕೆ. ಹುಬ್ಬಳ್ಳಿಯಲ್ಲಿ ಗ್ರಾಮಾಂತರ ಚನ್ನಮ್ಮನ ಕಿತ್ತೂರು, ಖಾನಾಪುರ, ಬೈಲಹೊಂಗಲದ ಪ್ರಮುಖರ ಸಭೆ ನಡೆಸುವ ಅವರು, ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಘಟಕದ ಅಧ್ಯಕ್ಷ ನಳಿನಕುಮಾರ್ ಕಟೀಲ್, ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೇರಿದಂತೆ ರಾಜ್ಯದ ಪ್ರಮುಖ ನಾಯಕರು ಇಡೀ‌ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು‌ ಹೇಳಿದರು.