ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಚುನಾವಣೆಗಳಲ್ಲಿ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಜನಪ್ರತಿನಿಧಿಗಳ ಆಯ್ಕೆಯಲ್ಲಿ ಭಾಗವಹಿಸಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವರಾಜ್ ಭೂತೆ ಅವರು ತಿಳಿಸಿದರು.
ಕರ್ನಾಟಕ ಕಲಾಮಂದಿರದಲ್ಲಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. 1950 ರಲ್ಲಿ ಚುನಾವಣಾ ಆಯೋಗ ಸ್ಥಾಪನೆ ಆಯಿತು. ಮತದಾರರ ದಿನಾಚರಣೆಯನ್ನು 2011 ರಿಂದ ಆಚರಣೆ ಮಾಡಲಾಗುತ್ತಿದೆ. ಇದರ ಮುಖ್ಯ ಉದ್ದೇಶ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವುದು ಹಾಗೂ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತದಾನ ಮಾಡುವುದು ಆಗಿದೆ. ಜನಪ್ರತಿನಿಧಿ ಗಳನ್ನು ಆಯ್ಕೆ ಮಾಡುವ ಅವಕಾಶ ಮತದಾರರಿಗೆ ಇದೆ. 18 ವರ್ಷ ತುಂಬಿದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಿ ಎಂದರು.
ಕಾರ್ಯ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ ರಾಜೇಂದ್ರ ಅವರು ಮಾತನಾಡಿ ಯುವ ಜನತೆಯನ್ನು ಮತದಾನದ ಭಾಗವಹಿಸುವಂತೆ ಮಾಡುವುದು, ಶಾಂತಿಯುತ ಮತದಾನ ಮಾಡುವುದು ಚುನಾವಣಾ ಆಯೋಗದ ಉದ್ದೇಶ. ನಮ್ಮ ಜಿಲ್ಲೆಯಲ್ಲಿ 1 ಲಕ್ಷಕ್ಕಿಂತ ಹೆಚ್ಚಿನ ಯುವ ಮತದಾರರು ಇದ್ದಾರೆ, ಆದರೆ 30 ಸಾವಿರ ಅಷ್ಟೇ ನೊಂದಣಿ ಆಗಿದ್ದಾರೆ. ವೋಟರ್ ಹೆಲ್ಪ್ ಲೈನ್ ಅಪ್ ಅನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ನೊಂದಣಿ, ತಿದ್ದುಪಡಿ ಮಾಡಿಕೊಳ್ಳಬಹುದು. ಪ್ರಜ್ಞಾವಂತ ಮತದಾರರಿಂದ ಸದೃಢ ದೇಶವನ್ನು ನಿರ್ಮಾಣ ಮಾಡಲು ಸಾಧ್ಯ. ಪ್ರತಿಯೊಬ್ಬರೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ, ಮಾಹಿತಿ ಸರಿಯಾಗಿ ಇದೆಯೇ ಎಂಬುದನ್ನು ಪರೀಕ್ಷಿಸಿಕೊಳ್ಳಿ, ಆಸೆ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಿ ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಯುವ ಮತದಾರರಿಗೆ ಇ ಎಪಿಕ್ ಕಾರ್ಡ್’ಗಳನ್ನು ವಿತರಣೆ ಮಾಡಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಆರ್. ಪೂರ್ಣಿಮಾ, ಅವರು ಮತದಾರರ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ಉತ್ತಮವಾಗಿ ಕಾರ್ಯನಿರ್ವಹಿಸಿದ ಬಿ ಎಲ್ ಓ ಗಳಿಗೆ, ಪ್ರಬಂಧ, ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ ರೆಡ್ಡಿ, ಅಪರ ಜಿಲ್ಲಾಧಿಕಾರಿ ಆರ್ ಲೋಕನಾಥ್, ಮೂಡಾ ಆಯುಕ್ತರಾದ ದಿನೇಶ್, ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾದ ಶಿವರಾಜ್, ಡಿಸಿಪಿ ಗೀತಾ, ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ರೂಪಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.