Saval TV on YouTube
ಮೈಸೂರು(Mysuru): ಫೆ.14ರಂದು ವಸ್ತುಪ್ರದರ್ಶನ ಮೈದಾನದಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ 150 ಕಂಪನಿಗಳು ಭಾಗವಹಿಸುತ್ತಿವೆ. ಕೌಶಲ ತರಬೇತಿಗೂ ಯೋಜಿಸಲಾಗಿದೆ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು.
ಇಲ್ಲಿನ ಜೆ.ಪಿ.ನಗರ ಸ್ಫೋರ್ಟ್ ಕ್ಲ್‌ಬ್‌ನಲ್ಲಿ ಶುಕ್ರವಾರ ನಡೆದ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗನ್ ಹೌಸ್ ಸಮೀಪದ ಶಂಕರ ಮಠದಲ್ಲಿ ಫೆ.15ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ 4,500 ಜನರಿಗೆ ಮನೆಗಳ ಹಕ್ಕುಪತ್ರ ವಿತರಿಸಲಾಗುವುದು ಎಂದರು.
ಸಮಸ್ಯೆಗೆ ಪರಿಹಾರ ಕೇಳಿಕೊಂಡು ನೀವು ಸರ್ಕಾರಿ ಕಚೇರಿಗೆ ಹೋಗುವ ಬದಲಾಗಿ, ಅಧಿಕಾರಿಗಳನ್ನೇ ನಿಮ್ಮ ಬಳಿಗೆ ಕರೆತರುವ ಕಾರ್ಯಕ್ರಮ ಮಾಡುತ್ತಿದ್ದೇವೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಇಡೀ ಕ್ಷೇತ್ರ ವ್ಯಾಪ್ತಿಯಲ್ಲಿ ಅದಾಲತ್ ಕಾರ್ಯಕ್ರಮ ರೂಪಿಸಿದ್ದು, 20 ಇಲಾಖೆಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದಲ್ಲಿ ಸ್ಥಳದಲ್ಲೇ ಪರಿಹಾರ ಕಲ್ಪಿಸಲಾಗುವುದು ಎಂದು ಹೇಳಿದರು.
ನಗರಪಾಲಿಕೆ ಸದಸ್ಯೆ ಶಾರದಮ್ಮ, ಮುಖಂಡ ಈಶ್ವರ್ ಇದ್ದರು.