ಮನೆ ರಾಷ್ಟ್ರೀಯ ಹುತಾತ್ಮರ ದಿನ: ಮಹಾತ್ಮ ಗಾಂಧೀಜಿಯವರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಹುತಾತ್ಮರ ದಿನ: ಮಹಾತ್ಮ ಗಾಂಧೀಜಿಯವರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

0

ನವದೆಹಲಿ(Newdelhi): ಮಹಾತ್ಮ ಗಾಂಧಿ ಅವರ 75ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ನಮನ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಬಾಪು ಅವರ ಪುಣ್ಯ ತಿಥಿಯಂದು ನಾನು ಅವರಿಗೆ ನಮಸ್ಕರಿಸುತ್ತೇನೆ ಮತ್ತು ಅವರ ಆಳವಾದ ಚಿಂತನೆಗಳನ್ನು ನೆನಪಿಸಿಕೊಳ್ಳುತ್ತೇನೆ. ನಮ್ಮ ರಾಷ್ಟ್ರದ ಸೇವೆಯಲ್ಲಿ ಹುತಾತ್ಮರಾದ ಎಲ್ಲರಿಗೂ ನಾನು ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ ಮತ್ತು ಅವು ಅಭಿವೃದ್ಧಿಗಾಗಿ ಕೆಲಸ ಮಾಡುವ ನಮ್ಮ ಸಂಕಲ್ಪವನ್ನು ಬಲಪಡಿಸುತ್ತಲೇ ಇರುತ್ತವೆ ಎಂದು ಹೇಳಿದ್ದಾರೆ.

ರಾಷ್ಟ್ರಪಿತ ಗಾಂಧೀಜಿಯವರು 1948ರಲ್ಲಿ ಇದೇ ದಿನ ನಾಥೂರಾಂ ಗೋಡ್ಸೆ ಗುಂಡಿಗೆ ಪ್ರಾಣತೆತ್ತರು.