ಮನೆ ಭಾಷೆ ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಸಮಿತಿ ರಚನೆ

ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಸಮಿತಿ ರಚನೆ

0

ಬೆಂಗಳೂರು: ತುಳು ಭಾಷೆಗೆ ರಾಜ್ಯದ ಎರಡನೆಯ ಅಧಿಕೃತ ಭಾಷೆಯ ಸ್ಥಾನಮಾನ ನೀಡುವುದಕ್ಕೆ ಸಂಬಂಧಿಸಿದಂತೆ ಡಾ ಮೋಹನ್ ಆಳ್ವ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ.

ಎರಡು ವಾರಗಳೊಳಗೆ ಈ ಸಂಬಂಧ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಟ್ವೀಟ್ ಮಾಡಿ ತಿಳಿಸಿದ್ದಾರೆ.

ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರಿಸಬೇಕೆಂದು ಕರಾವಳಿ ಕರ್ನಾಟಕದಲ್ಲಿ ಹಲವು ವರ್ಷಗಳಿಂದ ಬೇಡಿಕೆ ವ್ಯಕ್ತವಾಗುತ್ತಿತ್ತು. ಸಂಸದರು ಸಹ ಈ ಸಂಬಂಧ ಹಲವು ಬಾರಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.