ಮನೆ ಅಪರಾಧ ವಿದ್ಯಾರ್ಥಿ ಗುಂಪುಗಳ ನಡುವೆ ಜಗಳ: 12ನೇ ತರಗತಿ ವಿದ್ಯಾರ್ಥಿಯ ಎದೆಗೆ ಚಾಕುವಿನಿಂದ ಇರಿದು ಹತ್ಯೆ

ವಿದ್ಯಾರ್ಥಿ ಗುಂಪುಗಳ ನಡುವೆ ಜಗಳ: 12ನೇ ತರಗತಿ ವಿದ್ಯಾರ್ಥಿಯ ಎದೆಗೆ ಚಾಕುವಿನಿಂದ ಇರಿದು ಹತ್ಯೆ

0

ಹೊಸದಿಲ್ಲಿ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ಗುಂಪುಗಳೆರಡರ ನಡುವೆ ನಡೆದ ಜಗಳದಲ್ಲಿ 12ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಇಲ್ಲಿಯ ಓಖ್ಲಾ ಪ್ರದೇಶದಲ್ಲಿ ಸೋಮವಾರ ನಡೆದಿದೆ.

ಓಖ್ಲಾ ಫೇಸ್ 2ರ ಜೆಜೆ ಕ್ಯಾಂಪ್ ನಿವಾಸಿ ಕಲ್ಕಾಜಿ ಶಾಲೆಯ 18 ವರ್ಷದ ವಿದ್ಯಾರ್ಥಿ ಮೃತ ದುರ್ದೈವಿ.

ಹಂಸರಾಜ್ ಸೇಥಿ ಪಾರ್ಕ್ ಬಳಿ ವಿದ್ಯಾರ್ಥಿಗಳ ಎರಡು ಗುಂಪುಗಳ ಮಧ್ಯೆ ಘರ್ಷಣೆ ಸಂಭವಿಸಿತ್ತು. ಆಗ ಬಾಲಕನ ಎದೆಗೆ ಇರಿಯಲಾಗಿದೆ. ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ಪೂರ್ಣಿಮಾ ಸೇಥಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಐಪಿಸಿ ಸೆಕ್ಷನ್ 302ರ (ಕೊಲೆ) ಅಡಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಆರೋಪಿಗಳ ಪತ್ತೆಗಾಗಿ ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಅಲ್ಲದೇ ಸ್ಥಳೀಯರಿಂದ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವುದಾಗಿ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.

ಇನ್ನು, ಇತ್ತೀಚಿನ ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊಲೆ ಮತ್ತು ಅಪರಾಧ ಕೃತ್ಯಗಳಲ್ಲಿ ಹೆಚ್ಚಾಗಿ ವಿದ್ಯಾರ್ಥಿಗಳು ಸೇರಿದಂತೆ ಬಾಲಾಪರಾಧಿಗಳು ಭಾಗಿಯಾಗುತ್ತಿರುವುದಾಗಿ ಪೊಲೀಸ್​ ಮೂಲಗಳು ತಿಳಿಸಿವೆ.