ಮನೆ ರಾಷ್ಟ್ರೀಯ ಕೇಂದ್ರ ಬಜೆಟ್: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ

ಕೇಂದ್ರ ಬಜೆಟ್: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ

0

ನರೇಂದ್ರ ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಪೂರ್ಣಾವಧಿ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿದ್ದಾರೆ.

ಬಜೆಟ್’ನ ಮುಖ್ಯಾಂಶಗಳು

ಸೂಕ್ಷ್ಮ ನೀರಾವರಿ ಪ್ರೋತ್ಸಾಹಿಸಲು ಭದ್ರಾ ಮೇಲ್ದಂಡೆಗೆ ₹5,300 ಕೋಟಿ. ಬರಪೀಡಿತ ಪ್ರದೇಶಗಳಲ್ಲಿ ಸುಸ್ಥಿರ ಸೂಕ್ಷ್ಮ ನೀರಾವರಿ ಒದಗಿಸುವ ಗುರಿಯನ್ನು ಹೊಂದಿರುವ ಭದ್ರಾ ಮೇಲ್ಡಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳ ಕೇಂದ್ರ ನೆರವು ನೀಡಲಾಗುವುದು

* ಯುವ ಉದ್ಯಮಿಗಳು ಕೃಷಿ-ಸ್ಟಾರ್ಟ್‌’ಅಪ್‌’ಗಳನ್ನು ಆರಂಭಿಸಲು ಉತ್ತೇಜಕ ಕ್ರಮವಾಗಿ ಕೃಷಿ ವೇಗವರ್ಧಕ ನಿಧಿಯನ್ನು ಸ್ಥಾಪಿಸಲಾಗುವುದು. ರಾಜ್ಯಗಳ ಸಕ್ರಿಯ ಭಾಗವಹಿಸುವಿಕೆ, ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ ಪ್ರವಾಸೋದ್ಯಮಕ್ಕೆ ಉತ್ತೇನ ನೀಡಲಾಗುವುದು.

* 2014ರ ನಂತರ ಆರಂಭವಾಗಿರುವ 157 ವೈದ್ಯಕೀಯ ಕಾಲೇಜುಗಳಲ್ಲಿ 157 ಹೊಸ ನರ್ಸಿಂಗ್ ಕಾಲೇಜು ಆರಂಭಿಸಲಾಗುವುದು.

* ಪ್ರಧಾನ ಮಂತ್ರಿ ಆವಾಸ್ ಯೋಜನೆ ಶೇಕಡ 66ರಷ್ಟು ವಿಸ್ತರಿಸಲಾಗಿದ್ದು, ಅನುದಾನ ₹79,000 ಕೋಟಿಗೆ ಹೆಚ್ಚಿಸಲಾಗಿದೆ.

* 3.5 ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸುತ್ತಿರುವ 740 ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಕೇಂದ್ರ ಸರ್ಕಾರವು ಮುಂದಿನ ಮೂರು ವರ್ಷಗಳಲ್ಲಿ 38,800 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಿದೆ.