ನವದೆಹಲಿ: ಪ್ರಾದೇಶಿಕ ಸಂಪರ್ಕ ಸುಧಾರಣೆಗೆ 50ಕ್ಕೂ ಹೆಚ್ಚು ವಿಮಾನ ನಿಲ್ದಾಣ, ಏರೋಡ್ರೋಮ್, ಹೆಲಿಪೋರ್ಟ್’ಗಳನ್ನು ಸ್ಥಾಪಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಬುಧವಾರ 2023-24ರ ಕೇಂದ್ರ ಬಜೆಟ್ ಮಂಡನೆ ವೇಳೆ ಅವರು ಈ ಘೋಷಣೆ ಮಾಡಿದ್ದಾರೆ.
ದೇಶದಾದ್ಯಂತ ಪ್ರಾದೇಶಿಕ ಸಂಪರ್ಕವನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಉಡಾನ್ ಯೋಜನೆಗೆ ಈ ಕ್ರಮದಿಂದ ಮತ್ತಷ್ಟು ಉತ್ತೇಜನ ಸಿಗುವ ನಿರೀಕ್ಷೆಯಿದೆ.
ಸಂಪರ್ಕ ವ್ಯವಸ್ಥೆಯನ್ನು ಬಲಪಡಿಸಲು 50 ಹೆಚ್ಚುವರಿ ವಿಮಾನ ನಿಲ್ದಾಣಗಳು, ಏರೋಡ್ರೋಮ್, ಹೆಲಿಪ್ಯಾಡ್’ಗಳು ಮತ್ತು ಜಲ ಮಾರ್ಗಗಳನ್ನು ರೂಪಿಸಲಾಗುವುದು ಎಂದು ಸೀತಾರಾಮನ್ ಹೇಳಿದರು.