ರಾಘವೇಂದ್ರ ರಾಘವೇಂದ್ರ ರಾಘವೇಂದ್ರ ಎನ್ನಿರಿ
ನಾಮಸ್ಮರಣೆಯಿಂದ ನಿಜಾನಂದವನ್ನು ಹೊಂದಿರಿ|
ರಾಘವೇಂದ್ರ ರಾಘವೇಂದ್ರ
ತಂದೆ ತಾಯಿ ಬಂಧು ಬಳಗ ಎಲ್ಲ ನೀನೆ ಎನ್ನಿರಿ
ನಾನು ಎಂಬ ಮೋಹ ಮರೆತು ಎಂದೂ ಅವನ ನಂಬಿರಿ|
ಹೇಗೆ ಇರಲಿ ಎಲ್ಲೆ ಇರಲಿ…ಅವನ ಸ್ಮರಣೆ ಮಾಡಿರಿ….
ಧ್ಯಾನದಿಂದ ಮನವ ಸುಡುವ ಚಿಂತೆ ದೂರ ಮಾಡಿರಿ||ರಾಘವೇಂದ್ರ ||
ಮಾನ ಪ್ರಾಣ ಧನವು ಎಲ್ಲ ಸ್ವಾಮಿ ನಿನ್ನದೆನ್ನಿರಿ
ಗುರುವೆ ನಿನ್ನ ಕರುಣೆಯೊಂದೆ ಸಾಕು ನನಗೆ ಎನ್ನಿರಿ|
ಕಲ್ಲು ಮುಳ್ಳೊ ಸಿಡಿಲೊ ಮಳೆಯೊ ಅವನ ಕರುಣೆಯೆನ್ನಿರಿ
ಏನೇ ಬರಲಿ ಅವನದೆಂದು ನಂಬಿ ಮುಂದೆ ನಡೆಯಿರಿ||ರಾಘವೇಂದ್ರ ||
ನಿಮ್ಮ ಮನೆಯ ನಿಮ್ಮ ಮನದ ವಿಷಯವೆಲ್ಲ ಬಲ್ಲನು |
ಚಪಲದಿಂದ ಅಲೆವ ಮನದಲೆಂದು ಗುರುವು ನಿಲ್ಲನು
ಕೊಡುವುದೆಲ್ಲ ಕೊಡುವನವನು ಇನ್ನು ಆಸೆಯೇತಕೆ
ಕಲ್ಪವೃಕ್ಷದಂತೆ ಗುರುವು ಇರಲು ಚಿಂತೆಯೇತಕೆ||ರಾಘವೇಂದ್ರ ||
“ಪೂಜ್ಯಾಯ ರಾಘವೇಂದ್ರಾಯ, ಸತ್ಯಧರ್ಮವ್ರತಾಯಚ
ಭಜತಾಂ ಕಲ್ಪವೃಕ್ಷಾಯ, ನಮತಾಂ ಕಾಮಧೇನುವೆ…. ನಮತಾಂ ಕಾಮಧೇನುವೆ” ||