ಮನೆ ಅಪರಾಧ ನಿಂತಿದ್ದ ಲಾರಿಗೆ ಬಸ್ ಢಿಕ್ಕಿ: ಓರ್ವ ಸಾವು 9 ಮಂದಿಗೆ ಗಾಯ

ನಿಂತಿದ್ದ ಲಾರಿಗೆ ಬಸ್ ಢಿಕ್ಕಿ: ಓರ್ವ ಸಾವು 9 ಮಂದಿಗೆ ಗಾಯ

0

ಕಲಬುರಗಿ(Kalburgi): ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿ ಸಾವನ್ನಪ್ಪಿದ್ದು, ಇತರೆ 9 ಜನರು ಗಾಯಗೊಂಡಿದ್ದಾರೆ.

ಸೋಮವಾರ ನಸುಕಿನ ಜಾವ ಕಮಲಾಪುರ ತಾಲೂಕಿನ ಕುರಿಕೋಟ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಜಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

ಅಪಘಾತಕ್ಕೀಡಾದ ಬಸ್ ಬಳ್ಳಾರಿಯಿಂದ ಬೀದರಿಗೆ ತೆರಳುತ್ತಿತ್ತು. ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದೆ ಎಂದು ಮಾಹಗಾಂವ್ ಪೊಲೀಸ್ ಠಾಣೆ ಪಿಎಸ್’ಐ ತಿಳಿಸಿದ್ದಾರೆ.

ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.

ಅಪಘಾತದಿಂದಾಗಿ ಬೀದರ್ ಮತ್ತು ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರ ವ್ಯತ್ಯಯ ಉಂಟಾಗಿತ್ತು.