ಮನೆ ಆರೋಗ್ಯ ರಾಜ್ಯದಲ್ಲಿ 155 ಮಂದಿಗೆ ಕೊರೊನಾ ಪಾಸಿಟಿವ್

ರಾಜ್ಯದಲ್ಲಿ 155 ಮಂದಿಗೆ ಕೊರೊನಾ ಪಾಸಿಟಿವ್

0

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 39,42,730ಕ್ಕೆ ಏರಿಕೆಯಾಗಿದೆ ಎಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದರೊಂದಿಗೆ ಸಾವಿನ ಸಂಖ್ಯೆ 39996ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 97 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,79,605ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಮೂವರು ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಇಂದು 349 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 38,99,647ಕ್ಕೆ ಏರಿಕೆಯಾಗಿದೆ. ಇನ್ನು 3049 ಸಕ್ರಿಯ ಪ್ರಕರಣಗಳಿವೆ.