ಬೆಂಗಳೂರು(Bengaluru): ಮಿಷನ್ ಮೋದಿ ಡೆಮೊಕ್ರಾಟಿಕ್ ಡೆವಲಪ್ ಮೆಂಟ್ ಟ್ರಸ್ಟ್’ನ ಕರ್ನಾಟಕ ರಾಜ್ಯದ ಪ್ರಧಾನ ಕಾರ್ಯದರ್ಶಿಯಾಗಿ ತಳಕಾನೆ ರಾಜೇಂದ್ರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಫೆ.5 ರಂದು ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ನಡೆದ ಮಿಷನ್ ಮೋದಿ ಕಾರ್ಯಗಾರದಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ರಾಮ್ ಗೋಪಾಲ್ ಕಾಕ ಮತ್ತು ಮಿಷನ್ ಮೋದಿ ಕಾರ್ಯಕ್ರಮದ ಕರ್ನಾಟಕ ರಾಜ್ಯ ಅಧ್ಯಕ್ಷರಾದ ಜಿ.ಕೆ.ಕುಲಕರ್ಣಿ ಅವರು ಭಾಗಿಯಾಗಿದ್ದರು.
ಈ ವೇಳೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾದ ತಳಕಾನೆ ರಾಜೇಂದ್ರ ಅವರನ್ನು ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದ್ದಾರೆ.
ಶೃಂಗೇರಿ ಭಾಗದ ರಾಜಕೀಯದಲ್ಲಿ ಉತ್ತಮ ಹೆಸರು ಗಳಿಸಿರುವ ತಳಕಾನೆ ರಾಜೇಂದ್ರ ಅವರು ಇತ್ತೀಚಿಗೆ ಕೊಪ್ಪದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.