ಮನೆ ಸುದ್ದಿ ಜಾಲ ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣಕ್ಕೆ ವಿರೋಧಿಸಿ ಪ್ರತಿಭಟನೆ

ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣಕ್ಕೆ ವಿರೋಧಿಸಿ ಪ್ರತಿಭಟನೆ

0

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ  ಮುಂದಾದ ಸರ್ಕಾರದ ನಿರ್ಧಾರವನ್ನು ಖಂಡಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಚಾಮುಂಡಿಬೆಟ್ಟದ ತಪ್ಪಲಿನ ಬಳಿ ಪ್ರತಿಭಟ ನಡೆಸುವ ಮೂಲಕ ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ರೋಪ್ ವೇ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದರು.

ಚಾಮುಂಡಿ ಬೆಟ್ಟಕ್ಕೆ ಸಾಕಷ್ಟು ಮಾರ್ಗಗಳು ಇವೆ. ಸರ್ಕಾರ ಹಣ ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರುತ್ತಿದೆ. ಪ್ರವಾಸೋದ್ಯಮ ಅಭಿವೃದ್ಧಿ ನೆಪದಲ್ಲಿ ಅರಣ್ಯ ಸಂಪತ್ತು ಹಾಳು ಮಾಡಲು ಹೊರಟಿದೆ. ರೋಪ್ ವೇ ನಿರ್ಮಾಣದಿಂದ ಸಾವಿರಾರ ಮರಗಳು, ಕಾಡು ನಾಶ ಆಗಲಿದೆ. ಪ್ರಾಕೃತಿಕ ಸೌಂದರ್ಯವುಳ್ಳ ಚಾಮುಂಡಿ ಬೆಟ್ಟದ ಹಾಳು ಮಾಡುವುದು ಬೇಡ. ಯಾವುದೇ ಕಾರಣಕ್ಕೂ ಸರ್ಕಾರ ಈ ಯೋಜನೆ ಜಾರಿ ಮಾಡದಂತೆ ಪ್ರತಿಭಟನಾಕಾರರು  ಒತ್ತಾಯಿಸಿದರು.