ಮನೆ ಕಾನೂನು ಡಿಕೆಶಿಗೆ ನಿರಾಳ: ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

ಡಿಕೆಶಿಗೆ ನಿರಾಳ: ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

0

ಬೆಂಗಳೂರು: ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ಫೆ.24ರವರೆಗೆ ಮಧ್ಯಂತರ ತಡೆ‌ ನೀಡಿದೆ.

ಈ ಸಂಬಂಧ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ರಿಟ್‌ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣ’ಗಳ ವಿಚಾರಣೆ ನಡೆಸುವ ಹೈಕೋರ್ಟ್‌’ನ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಶುಕ್ರವಾರ ವಿಚಾರಣೆ ನಡೆಸಿದರು.

ತನಿಖಾಧಿಕಾರಿ ಫೆ.24ರೊಳಗೆ ತನಿಖೆಯ ಪ್ರಗತಿ ವರದಿ ಸಲ್ಲಿಸಲಿ, ಅಲ್ಲಿಯವರೆಗೂ ಸಿಬಿಐ ತನಿಖೆ ಮುಂದುವರೆಸದಂತೆ ಹೈಕೋರ್ಟ್ ಸೂಚನೆ ನೀಡಿದೆ.

ಈ ಪ್ರಕರಣದಲ್ಲಿ ಸಿಬಿಐ ತನಿಖೆಗೆ ತಡೆ ಕೋರಿ ಡಿಕೆ ಶಿವಕುಮಾರ್ ಹೈಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದರು. ಸಿಬಿಐ ಅಧಿಕಾರಿಗಳು ಪದೇ ಪದೇ ನೋಟಿಸ್ ನೀಡುತ್ತಿದ್ದಾರೆ. ಹೆಂಡತಿ, ಮಗಳಿಗೆ ನೋಟಿಸ್ ನೀಡುವ ಮೂಲಕ ಮಾನಸಿಕ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದರು.

ಪ್ರಕರಣದ ವಿವರ:

‘ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರ ಕಲಂ 13 (2), 13 (1)(ಇ) ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಪ್ರಕರಣ ದಾಖಲಿಸಿದೆ. ‘ಸಿಬಿಐ ದಾಖಲಿಸಿರುವ ಈ ಎಫ್‌ಐಆರ್‌ ಕಾನೂನು ಬಾಹಿರವಾಗಿದ್ದು ಇದನ್ನು ರದ್ದುಗೊಳಿಸಬೇಕು’ ಎಂದು ಕೋರಿ ಶಿವಕುಮಾರ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.