ಮನೆ ಉದ್ಯೋಗ ಕೇಂದ್ರ ಜಲ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕೇಂದ್ರ ಜಲ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಕೇಂದ್ರ ಜಲ ಆಯೋಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 33 ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಫೆಬ್ರವರಿ 23, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್’ಲೈನ್/ಪೋಸ್ಟ್ ಮುಖಾಂತರ ಅರ್ಜಿ ಹಾಕಿ.

ಹುದ್ದೆಯ ಮಾಹಿತಿ:

ಯುಡಿಸಿ – 7

ಅಸಿಸ್ಟೆಂಟ್/ ಅಸಿಸ್ಟೆಂಟ್ ಸೆಕ್ಷನ್ ಆಫೀಸರ್- 26

ಅರ್ಹತೆ ಏನಿರಬೇಕು?

ಯುಡಿಸಿ – 4ನೇ ಪೇ ಲೆವಲ್’ನ ನಿವೃತ್ತ ಅಧಿಕಾರಿಗಳು ಅರ್ಜಿ ಹಾಕಲು ಅರ್ಹರು

ಅಸಿಸ್ಟೆಂಟ್/ ಅಸಿಸ್ಟೆಂಟ್ ಸೆಕ್ಷನ್ ಆಫೀಸರ್- 6 &10 ನೇ ಪೇ ಲೆವೆಲ್’ನ ನಿವೃತ್ತ ಅಧಿಕಾರಿಗಳು ಅರ್ಜಿ ಹಾಕಲು ಅರ್ಹರು.

ವಯೋಮಿತಿ:

ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ನಿಯಮಾನುಸಾರ

ಉದ್ಯೋಗದ ಸ್ಥಳ:

ಭಾರತದಲ್ಲಿ ಎಲ್ಲಿ ಬೇಕಾದರೂ

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಅಧೀನ ಕಾರ್ಯದರ್ಶಿ

ಎಸ್ಟಾಬ್ಲಿಷ್’ಮೆಂಟ್-VII

3ನೇ ಮಹಡಿ (ದಕ್ಷಿಣ)

ಸೇವಾ ಭವನ

ಆರ್.ಕೆ. ಪುರಂ

ನವದೆಹಲಿ-110066

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/02/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 23, 2023