ಬೆಂಗಳೂರು(Bengaluru): ಚೆಕ್ ಬೌನ್ಸ್’ಗೆ ಸಂಬಂಧಿಸಿದ ಎಂಟು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಟ್ಟು 1.36 ಕೋಟಿಗೂ ಹೆಚ್ಚಿನ ಮೊತ್ತವನ್ನು ಫಿರ್ಯಾದುದಾರರಿಗೆ ಪಾವತಿಸುವಂತೆ ಆದೇಶ ನೀಡಿದೆ.
ತಪ್ಪಿದಲ್ಲಿ ಪ್ರತಿ ಪ್ರಕರಣದಲ್ಲಿ ತಲಾ ಆರು ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿದೆ.
ಈ ಕುರಿತ ಎಂಟು ಪ್ರತ್ಯೇಕ ಪ್ರಕರಣಗಳ ಮೇಲಿನ ಆದೇಶವನ್ನು ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಜೆ.ಪ್ರೀತ್ ಅವರು ಸೋಮವಾರ ಪ್ರಕಟಿಸಿದರು.
ಕುಮಾರಸ್ವಾಮಿ ಅವರು ವಿವಿಧ ಪ್ರಕರಣಗಳಲ್ಲಿ ಒಟ್ಟು 1,38,65,000 ಮೊತ್ತಕ್ಕೆ ಮರುಪಾವತಿಯ ಚೆಕ್ ನೀಡಿದ್ದರು. ಇದರಲ್ಲಿ 1,36,50,000 ಬಾಕಿ ಉಳಿಸಿಕೊಂಡಿದ್ದರು.
ಈ ಕುರಿತಂತೆ ಫಿರ್ಯಾದುಗಳು ಸಲ್ಲಿಕೆಯಾಗಿದ್ದವು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು ಈ ಆದೇಶ ಹೊರಡಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.