ಮನೆ ರಾಜ್ಯ ಗ್ಯಾರೇಜ್ ನಲ್ಲಿ ಅಗ್ನಿ ಅವಘಡ: ಕೋಟ್ಯಾಂತರ ರೂ ಮೌಲ್ಯದ ಕಾರುಗಳು ಬೆಂಕಿಗಾಹುತಿ

ಗ್ಯಾರೇಜ್ ನಲ್ಲಿ ಅಗ್ನಿ ಅವಘಡ: ಕೋಟ್ಯಾಂತರ ರೂ ಮೌಲ್ಯದ ಕಾರುಗಳು ಬೆಂಕಿಗಾಹುತಿ

0

ಬೆಂಗಳೂರು: ರಾಮಮೂರ್ತಿ ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಗ್ಯಾರೇಜ್’​ವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ  ಕೋಟ್ಯಾಂತರ ರೂಪಾಯಿ ಮೌಲ್ಯದ ಕಾರುಗಳು ಬೆಂಕಿಗಾಹುತಿಯಾಗಿವೆ.

10ಕ್ಕೂ ಅಧಿಕ ಕಾರುಗಳು ಸುಟ್ಟು ಕರಕಲಾಗಿವೆ.

ಚಾಂದ್ ಪಾಷ, ತಬೇರೇಸ್ ಪಾಷ ಎಂಬವರಿಗೆ ಸೇರಿದ ಜಿಟಿ ಗ್ಯಾರೇಜ್ ಟೆಕ್’​ನಲ್ಲಿ ಬುಧವಾರ ಸಂಜೆ 7 ಗಂಟೆ ಸುಮಾರಿಗೆ ಗ್ಯಾರೇಜ್​ನ ಸ್ಪಾಟರ್​’ನಲ್ಲಿ ಕೆಲಸ ಮಾಡುವಾಗ ಬೆಂಕಿ‌ ಕಿಡಿ ಹಾರಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದೆ.

ಮಾಹಿತಿ ಆಧರಿಸಿ ಸ್ಥಳಕ್ಕೆ ಐದಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.