ಮನೆ ಉದ್ಯೋಗ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಕೆಲಸ ಖಾಲಿ ಇದೆ: ಮಾರ್ಚ್ 18ರೊಳಗೆ ಅರ್ಜಿ ಸಲ್ಲಿಸಿ

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಕೆಲಸ ಖಾಲಿ ಇದೆ: ಮಾರ್ಚ್ 18ರೊಳಗೆ ಅರ್ಜಿ ಸಲ್ಲಿಸಿ

0

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 41 ಡೆಪ್ಯುಟಿ ಮ್ಯಾನೇಜರ್(ಟೆಕ್ನಿಕಲ್), ಡೆಪ್ಯುಟಿ ಮ್ಯಾನೇಜರ್ (ಲೀಗಲ್) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಕೆಲಸ ಬೇಕು ಎಂದು ಹಂಬಲಿಸುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಇದೇ ಮಾರ್ಚ್ 18, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಹುದ್ದೆಯ ಮಾಹಿತಿ:

ಡೆಪ್ಯುಟಿ ಮ್ಯಾನೇಜರ್(ಟೆಕ್ನಿಕಲ್)-11

ಡೆಪ್ಯುಟಿ ಮ್ಯಾನೇಜರ್ (ಲೀಗಲ್) – 18

ಡೆಪ್ಯುಟಿ ಮ್ಯಾನೇಜರ್ (ಫೈನಾನ್ಸ್ & ಅಕೌಂಟ್ಸ್)- 12

ವಿದ್ಯಾರ್ಹತೆ

ಡೆಪ್ಯುಟಿ ಮ್ಯಾನೇಜರ್(ಟೆಕ್ನಿಕಲ್)- ಪದವಿ

ಡೆಪ್ಯುಟಿ ಮ್ಯಾನೇಜರ್ (ಲೀಗಲ್) – ಕಾನೂನು ಪದವಿ

ಡೆಪ್ಯುಟಿ ಮ್ಯಾನೇಜರ್ (ಫೈನಾನ್ಸ್ & ಅಕೌಂಟ್ಸ್)- ACA/ ICWA/ MBA/ M.Com/ CFA/

ವಯೋಮಿತಿ:

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 25 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

OBC ಅಭ್ಯರ್ಥಿಗಳು- 3 ವರ್ಷ

SC/ST ಅಭ್ಯರ್ಥಿಗಳು- 5 ವರ್ಷ

PWD ಅಭ್ಯರ್ಥಿಗಳು- 10 ವರ್ಷ

ವೇತನ:

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 52,650-97,100 ವೇತನ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:

ಕರ್ನಾಟಕ ರಾಜ್ಯ ಹಣಕಾಸು  ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಮಾರ್ಚ್ 18, 2023ಕ್ಕೆ ಮುನ್ನ ಕಳುಹಿಸಬೇಕು.

ವ್ಯವಸ್ಥಾಪಕ ನಿರ್ದೇಶಕರು

ಕೆಎಸ್’ಎಫ್’ಸಿ  ಕೇಂದ್ರ ಕಚೇರಿ

ಕೆಎಸ್’ಎಫ್’ಸಿ  ಭವನ

ನಂ.1/1

ತಿಮ್ಮಯ್ಯ ರಸ್ತೆ

ಬೆಂಗಳೂರು 560052

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13/02/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 18, 2023