ಮೈಸೂರು: ಮೈಸೂರು ಜಿಲ್ಲೆಗೆ 2023-24ರ ಆಯವ್ಯಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಹಲವಾರು ಘೋಷಣೆಗಳನ್ನು ಮಾಡಿದ್ದು, ಅದರ ಮಾಹಿತಿ ಇಲ್ಲಿದೆ.
- 202 ಕೋಟಿ ರೂ. ವೆಚ್ಚದಲ್ಲಿ ಮೈಸೂರು, ಶಿವಮೊಗ್ಗ ಮತ್ತು ಕಲಬುರಗಿಗಳಲ್ಲಿ ಕಿದ್ವಾಯಿ ಸಂಸ್ಥೆಯಡಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.
- ಬೆಂಗಳೂರು, ಹುಬ್ಬಳ್ಳಿ, ಮೈಸೂರು ಮತ್ತು ಕಲಬುರಗಿಯ 4 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ IVF ಕಿನ್ಲಿಕ್ಗಳನ್ನು 6 ಕೋಟಿ ರೂ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.
- ಮೈಸೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾವೇರಿ ಕೋಲಾರ ಮತ್ತು ರಾಮನಗರಗಳಲ್ಲಿ Integrated Township ಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲು ಪ್ರತಿಷ್ಠಿತ ಖಾಸಗಿ ಸಂಸ್ಥೆಗಳಿಂದ Expression of Interest ಅನ್ನು ಆಹ್ವಾನಿಸಲಾಗಿದೆ.
- ಮೈಸೂರು ವಿಮಾನ ನಿಲ್ದಾಣವನ್ನು ಉನ್ನತೀಕರಿಸಲು ಭೂ ಸ್ವಾಧೀನಕ್ಕಾಗಿ ಕ್ರಮ ವಹಿಸಲಾಗಿದ್ದು, ಇದಕ್ಕಾಗಿ 320 ಕೋಟಿ ರೂ ಗಳಷ್ಟು ಹಂಚಿಕೆ ಮಾಡಲಾಗಿದೆ.
- ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗಾಗಿ ಕ್ರಮ ಕೈಗೊಳ್ಳಲಾಗುವುದು.
- ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದ ಬಳಿ ಎರಡೂವರೆ ಎಕರೆ ಜಾಗದಲ್ಲಿ ಅಂತರಾಷ್ಟ್ರೀಯ ಮಟ್ಟದ ರಾಜ್ಯ ವಸ್ತು ಸಂಗ್ರಹಾಲಯ ಮತ್ತು ಕಲಾ ಗ್ಯಾಲರಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.
- ಕಾಡಾನೆ ಹಾವಳಿ ತಡೆಗಟ್ಟಲು ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಡಾನೆ ಕಾರ್ಯಪಡೆಯನ್ನು ರಚಿಸಲಾಗಿದೆ.