ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 22 ಸ್ಟಾಫ್ ನರ್ಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಇದೇ ಫೆಬ್ರವರಿ 22, 2023, ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ . ಅಭ್ಯರ್ಥಿಗಳು ಆಫ್’ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು.
ವಿದ್ಯಾರ್ಹತೆ:
ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಜಿಎನ್ಎಂ ನರ್ಸಿಂಗ್ ಪೂರ್ಣಗೊಳಿಸಿರಬೇಕು.
ಅನುಭವ:
ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕಡ್ಡಾಯವಾಗಿ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ವಯೋಮಿತಿ:
ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಟಾಫ್ ನರ್ಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 13,225 ರೂ. ವೇತನ ಕೊಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ಲಿಖಿತ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 22, 2023 (ನಾಳೆ)
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜಿಲ್ಲಾ ಯೋಜನಾ ನಿರ್ವಹಣಾ ಘಟಕ (N.H.M)
ಜಿಲ್ಲಾ ಪ್ರಯೋಗಾಲಯ ಆವರಣ
ಜಿಲ್ಲಾ ಆಸ್ಪತ್ರೆ ಹಿಂಭಾಗ
ಚಿತ್ರದುರ್ಗ
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂಬರ್ 9449843104 ಗೆ ಕರೆ ಮಾಡಿ
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.