ಭಾರತೀಯ ಅಂಚೆ ಇಲಾಖೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ನಡೆಸುತ್ತಿದೆ. ಒಟ್ಟು 2 ನುರಿತ ಕುಶಲಕರ್ಮಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಮಾರ್ಚ್ 11, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ವಿದ್ಯಾರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 8ನೇ ತರಗತಿ ಪಾಸಾಗಿರಬೇಕು.
ವಯೋಮಿತಿ: ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 1, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಟ್ರೇಡ್ ಟೆಸ್ಟ್ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ: ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹19,900 ಸಂಬಳ ಕೊಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮ್ಯಾನೇಜರ್
ಮೇಲ್ ಮೋಟಾರ್ ಸೇವೆ
GPO ಕಾಂಪೌಂಡ್
ಸಿವಿಲ್ ಲೈನ್ಸ್
ನಾಗ್ಪುರ-440001
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 11, 2023