ಮನೆ ರಾಜ್ಯ ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

0

ಹುಬ್ಬಳ್ಳಿ: ಬಳ್ಳಾರಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದರು.

ಅಮಿತ್ ಶಾ ಅವರಿಗೆ ಇದೇ ವೇಳೆ ವಿಶೇಷ ಗೌರವ ಸೂಚಿಸುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಅಮಿತ್ ಶಾ ಅವರನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗ್ಡೆ ಹಾಗೂ ಪೊಲೀಸ್ ಆಯುಕ್ತರಾದ ರಮಣ ಗುಪ್ತಾ ಸರ್ಕಾರಿ ಗೌರವದೊಂದಿಗೆ ಸ್ವಾಗತಿಸಿದರು.

ಅಮಿತ್​​ ಶಾ ಆಗಮನದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಸುತ್ತಮುತ್ತ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು.

ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಹೆಲಿಕಾಪ್ಟರ್ ಮೂಲಕ ಸಂಡೂರಿಗೆ ತೆರಳಿದರು.