ಮನೆ ಉದ್ಯೋಗ ಚಿತ್ರದುರ್ಗ ಜಿಲ್ಲೆಯಲ್ಲಿ 59 ಗ್ರಾಮ ಲೆಕ್ಕಿಗರ ನೇಮಕ: ಹೆಚ್ಚುವರಿ ಅಂತಿಮ ಆಯ್ಕೆಪಟ್ಟಿ ಪ್ರಕಟ

ಚಿತ್ರದುರ್ಗ ಜಿಲ್ಲೆಯಲ್ಲಿ 59 ಗ್ರಾಮ ಲೆಕ್ಕಿಗರ ನೇಮಕ: ಹೆಚ್ಚುವರಿ ಅಂತಿಮ ಆಯ್ಕೆಪಟ್ಟಿ ಪ್ರಕಟ

0

ಚಿತ್ರದುರ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 59 ಗ್ರಾಮಲೆಕ್ಕಾಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ, ಇದೀಗ ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಗ್ರಾಮಲೆಕ್ಕಿಗರ ಹೆಚ್ಚುವರಿ ಅಂತಿಮ ಆಯ್ಕೆಪಟ್ಟಿಯಲ್ಲಿ ಒಟ್ಟು 15 ಅಭ್ಯರ್ಥಿಗಳ ಹೆಸರನ್ನು ನೀಡಲಾಗಿದೆ. ಹಾಗೂ ಅವರು ಆಯ್ಕೆಯಾದ ಮೀಸಲಾತಿ ವರ್ಗದ ವಿವರ, ನೇರ ನೇಮಕಾತಿಗೆ ಪರಿಗಣಿಸಿದ ದ್ವಿತೀಯ ಪಿಯುಸಿ ಶೇಕಡ ಅಂಕಗಳು, ಇತರೆ ಮಾಹಿತಿಗಳನ್ನು ನೀಡಲಾಗಿದೆ.

ಈ ಹುದ್ದೆಗಳಿಗೆ 1:5 ಅನುಪಾತದಲ್ಲಿ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಹೆಚ್ಚುವರಿ ಅಂತಿಮ ಆಯ್ಕೆಪಟ್ಟಿಯನ್ನು ಚೆಕ್ ಮಾಡಲು ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಅಧಿಕೃತ ವೆಬ್’ಸೈಟ್’ಗೆ ಭೇಟಿ ನೀಡಿ.

ಗ್ರಾಮ ಲೆಕ್ಕಿಗರ ನೇಮಕಾತಿ ನಿಯಮ / ವಿಧಾನ

ರಾಜ್ಯ ಕಂದಾಯ ಇಲಾಖೆಯ ಕೆಲಸ ಕಾರ್ಯಗಳನ್ನು ತಳಮಟ್ಟದಲ್ಲಿ ಗ್ರಾಮಲೆಕ್ಕಿಗರ ಮೂಲಕ ಕಾರ್ಯಗತಗೊಳಿಸಬೇಕಾದ ಹಿನ್ನೆಲೆಯಲ್ಲಿ ಹಾಗೂ ಜಿಲ್ಲಾಧಿಕಾರಿಯವರು ಗ್ರಾಮಲೆಕ್ಕಿಗರ ನೇಮಕಾತಿಯ ಸಕ್ಷಮ ಪ್ರಾಧಿಕಾರ ಆಗಿರುವುದರಿಂದ ಮತ್ತು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ, 14)ಕ್ಕೆ ಕರ್ನಾಟಕ ಸಾಮಾನ್ಯ ಸೇವೆಗಳು (ರೆವಿನ್ಯೂ ಸಬಾರ್ಡಿನೇಟ್ ಬ್ರಾಂಚ್) (ವೃಂದ ಮತ್ತು ನೇಮಕಾತಿ) (ತಿದ್ದುಪಡಿ) ನಿಯಮಗಳು 2008 ರನ್ವಯ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಗರಿಷ್ಠ ಅಂಕಗಳನ್ನು ಪರಿಗಣಿಸಿ ಗ್ರಾಮಲೆಕ್ಕಿಗರ ಹುದ್ದೆಗಳನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯಾ ಜಿಲ್ಲೆಗಳಲ್ಲಿನ ಖಾಲಿ ಹುದ್ದೆಗಳಿಗೆ ಅನುಗುಣವಾಗಿ ನೇರ ನೇಮಕಾತಿ ಮೂಲಕ ನಿಯಮಾನುಸಾರ ಭರ್ತಿ ಮಾಡಿಕೊಳ್ಳಲಾಗುತ್ತಿದೆ.