ಸಿಧಿ, ಮಧ್ಯಪ್ರದೇಶ: ಮೊಹಾನಿಯಾ ಸುರಂಗದ ಬಳಿ ನಿಂತಿದ್ದ ಬಸ್ಗಳಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ, 14 ಜನರು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರ ರ್ಯಾಲಿಗೆ ತೆರಳಿದ್ದ ಬಸ್’ಗಳು ವಾಪಸ್ ಆಗುತ್ತಿದ್ದವು. ಈ ವೇಳೆ, ಬಸ್ ಚಾಲಕರು ಸುರಂಗ ಮಾರ್ಗದ ಬಳಿ ಬಸ್’ಗಳನ್ನು ನಿಲ್ಲಿಸಿದ್ದಾರೆ. ಆಗ ಎದುರಿನಿಂದ ವೇಗವಾಗಿ ಬರುತ್ತಿದ್ದ ಟ್ರಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಬಸ್’ವೊಂದು ಪಲ್ಟಿಯಾಗಿದ್ದು, ಉಳಿದ ಬಸ್’ಗಳು ಜಖಂಗೊಂಡಿದ್ದವು. ಈ ಭೀಕರ ಅಪಘಾತದಲ್ಲಿ 14 ಜನ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇದರಲ್ಲಿ 5 ಮಂದಿಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಗಾಯಾಳುಗಳನ್ನು ರೇವಾದ ಸಂಜಯ್ ಗಾಂಧಿ ಆಸ್ಪತ್ರೆ ಮತ್ತು ಸಿಧಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸಂತಾಪ: ಅಪಘಾತದ ಬಗ್ಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಿದ್ದಿಯಲ್ಲಿ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದ ಬಗ್ಗೆ ಅತ್ಯಂತ ದುಃಖದ ಸುದ್ದಿ ಬಂದಿದೆ. ದೇವರು ಅಗಲಿದ ಆತ್ಮಗಳಿಗೆ ಅವರ ಪುಣ್ಯ ಪಾದದಲ್ಲಿ ಸ್ಥಾನ ನೀಡಲಿ ಮತ್ತು ಕುಟುಂಬ ಸದಸ್ಯರಿಗೆ ಈ ಆಳವಾದ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಪರಿಹಾರ ಘೋಷಣೆ: ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ಹಾಗೂ ಸಾಮಾನ್ಯ ಗಾಯಾಳುಗಳಿಗೆ 1 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.