ಮನೆ ರಾಜ್ಯ ಭಾರತ್ ಜೋಡೋ ಯಾತ್ರೆಯೊಂದಿಗೆ ನನ್ನ ಇನ್ನಿಂಗ್ಸ್ ಮುಕ್ತಾಯವಾಗಬಹುದು: ನಿವೃತ್ತಿ ಸುಳಿವು ನೀಡಿದ ಸೋನಿಯಾ ಗಾಂಧಿ

ಭಾರತ್ ಜೋಡೋ ಯಾತ್ರೆಯೊಂದಿಗೆ ನನ್ನ ಇನ್ನಿಂಗ್ಸ್ ಮುಕ್ತಾಯವಾಗಬಹುದು: ನಿವೃತ್ತಿ ಸುಳಿವು ನೀಡಿದ ಸೋನಿಯಾ ಗಾಂಧಿ

0

ನವದೆಹಲಿ: “ಭಾರತ್ ಜೋಡೋ ಯಾತ್ರೆಯೊಂದಿಗೆ ನನ್ನ ಇನ್ನಿಂಗ್ಸ್ ಮುಕ್ತಾಯವಾಗಬಹುದು ಎಂದು ಕಾಂಗ್ರೆಸ್ ಸಂಸದೆ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳುವ ಮೂಲಕ ಪರೋಕ್ಷವಾಗಿ ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ನೀಡಿದ್ದಾರೆ.

ರಾಯ್ ಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಮಹಾಅಧಿವೇಶನದ ಎರಡನೇ ದಿನ, ಪಕ್ಷದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಸೋನಿಯಾ, 2004, 2009ರಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿರುವುದು ನನಗೆ ತುಂಬಾ ತೃಪ್ತಿ ಕೊಟ್ಟಿದೆ. ಅದೇ ರೀತಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನೇತೃತ್ವದ ಆಡಳಿತವನ್ನು ಅವರು ಶ್ಲಾಘಿಸಿದ್ದಾರೆ.

ಕೇಸರಿ ಪಕ್ಷ ದೇಶದಲ್ಲಿರುವ ಪ್ರತಿಯೊಂದು ಸಂಸ್ಥೆಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಅದನ್ನು ನಾಶಗೊಳಿಸುತ್ತಿದೆ ಎಂದು ಇದೇ ಸಂದರ್ಭದಲ್ಲಿ ಟೀಕಿಸಿದ್ದಾರೆ.

ಬಿಜೆಪಿ ಆಡಳಿತ ವೈಖರಿಯ ಈ ಸಮಯ ಕಾಂಗ್ರೆಸ್ ಮತ್ತು ಇಡೀ ದೇಶಕ್ಕೆ ಸವಾಲಿನದ್ದಾಗಿದೆ. ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶದಲ್ಲಿರುವ ಪ್ರತಿಯೊಂದು ಸಂಸ್ಥೆಗಳನ್ನು ವ್ಯವಸ್ಥಿತವಾಗಿ ಹಿಡಿತಕ್ಕೆ ತೆಗೆದುಕೊಂಡು ಬುಡಮೇಲು ಮಾಡಿದೆ. ಇದರ ಪರಿಣಾಮ ಕೆಲವು ಉದ್ಯಮಿಗಳಿಗೆ ಮಾತ್ರ ಅವಕಾಶ ನೀಡುವ ಮೂಲಕ ಆರ್ಥಿಕ ವಿನಾಶಕ್ಕೆ ಕಾರಣವಾಗುತ್ತಿದೆ ಎಂದು ದೂರಿದ್ದಾರೆ.