ಮನೆ ರಾಜ್ಯ ಮೋದಿ ಕಾರ್ಯಕ್ರಮ ಬಹಿಷ್ಕರಿಸುತ್ತೇನೆ: ಕಸಾಪ ಅಧ್ಯಕ್ಷ ಮಹೇಶ್ ಜೋಶಿ

ಮೋದಿ ಕಾರ್ಯಕ್ರಮ ಬಹಿಷ್ಕರಿಸುತ್ತೇನೆ: ಕಸಾಪ ಅಧ್ಯಕ್ಷ ಮಹೇಶ್ ಜೋಶಿ

0

ನವದೆಹಲಿ: ದೆಹಲಿ ಕರ್ನಾಟಕ ಸಂಘದ 75 ನೇ ಅಮೃತ ಮಹೋತ್ಸವವನ್ನು ಇಂದು ಸಂಜೆ 5 ಗಂಟೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಸರಿಯಾದ ಸ್ಥಾನಮಾನ ಕೊಡದ ಕಾರಣಕ್ಕೆ ಮೋದಿ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಷಿ ತಿಳಿಸಿದ್ದಾರೆ.

ಇಂದು ನಡೆಯುವ ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ‘ಏಕ ಭಾರತ ಶ್ರೇಷ್ಠ ಭಾರತ’ದ ಆಶಯಕ್ಕೆ ಅನುಗುಣವಾಗಿ, ಕರ್ನಾಟಕದ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಇತಿಹಾಸವನ್ನು ಕೊಂಡಾಡಲು ‘ಬಾರಿಸು ಕನ್ನಡ ಡಿಂಡಿಮವ’ ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಶ್ರೀ ಸ್ಪಟಿಕಪುರ ನಂಜಾವಧೂತ ಸ್ವಾಮೀಜಿ, ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಯದುವೀರ್ ಒಡೆಯರ್ ಭಾಗವಹಿಸಲಿದ್ದಾರೆ. ಹಾಗೇ ಕಾರ್ಯಕ್ರಮದಲ್ಲಿ 3 ಸಾವಿರಕ್ಕೂ ಅಧಿಕ ಹೊರನಾಡ ಕನ್ನಡಿಗರು ಭಾಗಿ ನಿರೀಕ್ಷೆ ಇದೆ.

ಕಾರ್ಯಕ್ರಮ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ದೆಹಲಿಗೆ ತೆರಳಿದ್ದಾರೆ. ಈ ಉತ್ಸವದ ಎರಡು ದಿನಗಳ ಆಚರಣೆಯಲ್ಲಿ ಸಾಂಪ್ರದಾಯಿಕ ಸಂಗೀತ, ನೃತ್ಯ ಮತ್ತು ಕವನ ವಾಚನದ ಮೂಲಕ ರಾಜ್ಯದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರದರ್ಶನವಾಗುತ್ತದೆ.