ಮನೆ ರಾಜ್ಯ ಬೆಳಗಾವಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಬೆಳಗಾವಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

0

ಬೆಳಗಾವಿ: ತಾಲ್ಲೂಕಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮಧ್ಯಾಹ್ನ ಸೇನಾ ವಿಮಾನದಲ್ಲಿ ಆಗಮಿಸಿದ್ದಾರೆ.

ಮುಖ್ಯಮಂಮತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಎಡಿಜಿಪಿ(ಕಾನೂನು ಮತ್ತು ಸುವ್ಯವಸ್ಥೆ ವಿಭಾಗ) ಅಲೋಕ್ ಕುಮಾರ್, ಬೆಳಗಾವಿ ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಇಲ್ಲಿಂದ ಕೆಎಸ್‌’ಆರ್‌’ಪಿ ಮೈದಾನಕ್ಕೆ ತೆರಳಿ ರೋಡ್‌ ಶೋನಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ.

ಬಳಿಕ, ಬಿ.ಎಸ್‌.ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿರುವ ಕಾರ್ಯಕ್ರಮಕ್ಕೆ ಬಂದಿರುವ ಕಿಸಾನ್‌ ಸಮ್ಮಾನ್‌ ನಿಧಿ ಫಲಾನುಭವಿಗಳು ಹಾಗೂ ಸಾರ್ವಜನಿಕರಿಗೆ ಅಚ್ಚುಕಟ್ಟಾದ ಊಟದ ವ್ಯವಸ್ಥೆ ಮಾಡಲಾಗಿದೆ.

ಮಾಲಿನಿ ಸಿಟಿ, ಅಲಾರವಾಡ ರಸ್ತೆಬದಿ, ಹಲಗಾ ಗ್ರಾಮದ ಬಳಿ ತಲಾ 40 ಕೌಂಟರ್‌, ಬಿ.ಎಸ್‌.ಯಡಿಯೂರಪ್ಪ ಮಾರ್ಗದಲ್ಲಿ 80 ಕೌಂಟರ್‌ ತೆರೆಯಲಾಗಿದೆ.