ಮನೆ ರಾಷ್ಟ್ರೀಯ ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ ಚೆನ್ನೈ ಆಸ್ಪತ್ರೆಗೆ ದಾಖಲು

ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ ಚೆನ್ನೈ ಆಸ್ಪತ್ರೆಗೆ ದಾಖಲು

0

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅವರನ್ನು ಕಿಡ್ನಿ ಸಮಸ್ಯೆಯಿಂದಾಗಿ ಅಯನಂಬಾಕ್ಕಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಹ್ಲಾದ್ ಮೋದಿ ಅವರು ತಮ್ಮ ಕುಟುಂಬದೊಂದಿಗೆ ತಮಿಳುನಾಡು ಹಾಗೂ ಕೇರಳದ ಆಧ್ಯಾತ್ಮಿಕ ಕ್ಷೇತ್ರಗಳ ಪ್ರವಾಸದಲ್ಲಿದ್ದಾರೆ. ಅನಿರೀಕ್ಷಿತವಾಗಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಪರಿಣಾಮ ಅವರನ್ನು ಚೆನ್ನೈ ಆಸ್ಪತ್ರೆಗೆ ದಾಖಲು ಮಾಡಲಾಯಿತು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಸದ್ಯ ಅವರಿಗೆ ಚಿಕಿತ್ಸೆ ಮುಂದವರಿಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.