ಮನೆ ರಾಜ್ಯ ಏಪ್ರಿಲ್ 1 ರಿಂದ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂ. ಸಾಲ ನೀಡುವ ಯೋಜನೆ...

ಏಪ್ರಿಲ್ 1 ರಿಂದ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂ. ಸಾಲ ನೀಡುವ ಯೋಜನೆ ಪ್ರಾರಂಭ: ಎಸ್.ಟಿ.ಸೋಮಶೇಖರ್

0

ಬೆಂಗಳೂರು: ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಶೂನ್ಯ ಬಡ್ಡಿ ದರದಲ್ಲಿ ಐದು ಲಕ್ಷ ರೂ. ಸಾಲ ನೀಡುವ ಯೋಜನೆ ಪ್ರಾರಂಭಗೊಳ್ಳಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಬಜೆಟ್ ಘೋಷಣೆಯನ್ನು ಅತ್ಯಂತ ಶೀಘ್ರ ಅನುಷ್ಠಾನಕ್ಕೆ ತರುತ್ತೇವೆ. ಡಿಸಿಸಿ ಬ್ಯಾಂಕ್ ಗಳ ಮೂಲಕ ಸಾಲ ವಿತರಣೆ ಮಾಡಲಾಗುವುದು ಎಂದರು.

ಈ ಯೋಜನೆಗೆ ಬಜೆಟ್ ನಲ್ಲಿ ಅನುಮತಿ ನೀಡಲಾಗಿದೆ. ಸದ್ಯದಲ್ಲೇ ರಾಜ್ಯಪಾಲರ ಅನುಮತಿ ಸಿಗಲಿದೆ. ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಈ ಯೋಜನೆ ಜಾರಿ ಮಾಡುತ್ತೇವೆ. ಒಟ್ಟು 33 ಲಕ್ಷ ಜನರಿಗೆ ಇದರ ಫಲಾನುಭವ ಸಿಗಲಿದೆ ಎಂದು ಹೇಳಿದರು.