ಮನೆ ಸುದ್ದಿ ಜಾಲ ಅಡುಗೆ ಅನಿಲ ದರ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್’ನಿಂದ ಪ್ರತಿಭಟನೆ

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್’ನಿಂದ ಪ್ರತಿಭಟನೆ

0

ಮೈಸೂರು : ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಜಿಲ್ಲೆ ಮಹಿಳಾ ಕಾಂಗ್ರೆಸ್ ವತಿಯಿಂದ ಇಂದು ನಗರದ ಗಾಂಧಿ  ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಡಾ ಪುಷ್ಪ ಅಮರನಾಥ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.  ಪ್ರತಿಭಟನೆ ವೇಳೆ ಗ್ಯಾಸ್ ಸಿಲಿಂಡರ್ ಮೇಲೆ ಸೌಟಿನಿಂದ ಕುಟ್ಟಿ ಬಿಜೆಪಿ ಸರ್ಕಾರ ವಿರುದ್ಧ ಕಿಡಿಕಾರಿದರು.

ಈ ವೇಳೆ ಮಾತನಾಡಿದ ಡಾ.ಪುಷ್ಪಾ ಅಮರನಾಥ್, ಸರ್ಕಾರ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ಪ್ರತಿ ಬಾರಿ ಅಗತ್ಯ ವಸ್ತುಗಳ ಬೆಲೆಗಳ ಹೆಚ್ಚಿಸುವುದನ್ನು ಬಿಡಬೇಕು. ಬಿಜೆಪಿ ಸರ್ಕಾರ ಬಂದ ನಂತರ ನಿರಂತರವಾಗಿ ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆ ಏರಿಕೆ ಮಾಡುತ್ತಲೇ ಬಂದಿದ್ದಾರೆ. 410 ರೂಪಾಯಿ ಇದ್ದ ಗ್ಯಾಸ್ ಬೆಲೆ ಇಂದು 1200 ರೂಪಾಯಿಗೆ ಬಂದಿದೆ. ದುಡ್ಡು ಮಾಡಲೆಂದೇ ಬಿಜೆಪಿ ಸರ್ಕಾರ ಅಧಿಕಾರ ನಡೆಸುತ್ತಿದೆ. ನಿಮ್ಮ ದಮ್ಮು ತಾಕತ್ತನ್ನು ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಮಾಡಿ ತೋರಿಸಿ. ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದು ಹೇಳುವ ಬಿಜೆಪಿಗರೇ, ಬೆಲೆ ಏರಿಕೆ ಬಗ್ಗೆ ಮಾತಾಡಿ ಎಂದು ಕಿಡಿಕಾರಿದರು.