ಮನೆ ಕಾನೂನು ಮಾಡಾಳ್ ವಿರೂಪಾಕ್ಷಪ್ಪಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು

ಮಾಡಾಳ್ ವಿರೂಪಾಕ್ಷಪ್ಪಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು

0

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌’ಡಿಎಲ್‌) ಟೆಂಡರ್‌ ಪ್ರಕ್ರಿಯೆ ಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋ‍ಪಿಯಾಗಿ ರುವ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್‌ ಮಂಗಳವಾರ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮೇಲ್ಮನವಿ ವಿಚಾರಣೆಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅವರು ವಿರೂಪಾಕ್ಷಪ್ಪ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದರು.

5 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಇಬ್ಬರ ಭದ್ರತೆಯ ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿದರು. ಇದೇ 17ಕ್ಕೆ ವಿಚಾರಣೆ ಮುಂದೂಡಲಾಗಿದೆ.