ಮನೆ ರಾಷ್ಟ್ರೀಯ ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಪ್ರಸಾದ್ ಯಾದವ್ ಕುಟುಂಬಸ್ಥರ ಸ್ಥಳಗಳು ಸೇರಿದಂತೆ ಹಲವೆಡೆ ಇಡಿ ದಾಳಿ

ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಪ್ರಸಾದ್ ಯಾದವ್ ಕುಟುಂಬಸ್ಥರ ಸ್ಥಳಗಳು ಸೇರಿದಂತೆ ಹಲವೆಡೆ ಇಡಿ ದಾಳಿ

0

ನವದೆಹಲಿ/ಪಟ್ನಾ: ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಮೂವರು ಪುತ್ರಿಯರು ಹಾಗೂ ಆರ್‌’ಜೆಡಿ ನಾಯಕರ ಸ್ಥಳಗಳು ಸೇರಿದಂತೆ ಅನೇಕ ಕಡೆಗಳಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಹಾರದ ಪಟ್ನಾ, ದೆಹಲಿ, ರಾಂಚಿ, ಮುಂಬೈ ಸೇರಿದಂತೆ ಅನೇಕ ಕಡೆಗಳಲ್ಲಿ ಇ.ಡಿ ಶೋಧ ಕಾರ್ಯ ನಡೆಸಿದೆ.

ಲಾಲು ಪ್ರಸಾದ್ ಪುತ್ರಿಯರಾದ ರಾಗಿಣಿ ಯಾದವ್, ಚಂದಾ ಯಾದವ್ ಮತ್ತು ಹೇಮಾ ಯಾದವ್ ಮತ್ತು ಆರ್‌ಜೆಡಿಯ ಮಾಜಿ ಶಾಸಕ ಅಬು ದೋಜಾನ ಅವರಿಗೆ ಸೇರಿದ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಕಳೆದ ವಾರವಷ್ಟೇ ಲಾಲು ಮತ್ತು ಅವರ ಪತ್ನಿ, ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಅವರನ್ನು ಸಿಬಿಐ ತನಿಖೆಗೆ ಒಳಪಡಿಸಿತ್ತು.ಲಾಲು ಮತ್ತು ರಾಬ್ಡಿ ಸೇರಿದಂತೆ ಇತರೆ 14 ಮಂದಿ ವಿರುದ್ಧ ಸಿಬಿಐ ಆರೋಪಟ್ಟಿ ಸಲ್ಲಿಸಿದೆ. ಅಲ್ಲದೆ ಮಾರ್ಚ್ 15ಕ್ಕೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ನೀಡಿದೆ.