ಹುಬ್ಬಳ್ಳಿ: ಸಚಿವ ವಿ. ಸೋಮಣ್ಣ ನಮ್ಮ ಜೊತೆ ಇದ್ದಾರೆ. ಮುಂದೆಯೂ ಜೊತೆಗೇ ಇರುತ್ತಾರೆ. ಯಾವುದೇ ಊಹಾಪೋಹ ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿ. ಸೋಮಣ್ಣ ಅವರ ಜೊತೆ ನಿನ್ನೆ ಹುಬ್ಬಳ್ಳಿಯಲ್ಲಿ ಯಾವುದೇ ಮಾತುಕತೆ ನಡೆದಿಲ್ಲ. ನಮ್ಮ ಭೇಟಿ ಕೇವಲ ಔಪಚಾರಿಕ ಎಂದರು.
ಒಂದಿಷ್ಟು ಯೋಜನೆಗಳ ಕ್ರೆಡಿಟ್ ಪಡೆಯಲು ಕೆಲವರು ಮುಂದಾಗಿದ್ದಾರೆ. ಕ್ರೆಡಿಟ್ ವಾರ್ ಸಹಜ. ಪಕ್ಕದ ಮನೆಯವರು ಗಂಡು ಹಡೆದರೆ, ಇವರು ಸಿಹಿ ಹಂಚುತ್ತಾರೆ ಎಂದು ವಿರೋಧ ಪಕ್ಷಗಳಿಗೆ ಬೊಮ್ಮಾಯಿ ಟಾಂಗ್ ನೀಡಿದರು.
ಬಿಜೆಪಿಗೆ ಮೋದಿ ದೇವರು ಎನ್ನುವ ಕಾಂಗ್ರೆಸ್ ಟೀಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ನಾವು ಮೋದಿ ಅವರನ್ನು ಎಂದಿಗೂ ದೇವರು ಅಂದಿಲ್ಲ. ಅವರು ಸಹ ತಮ್ಮನ್ನು ದೇವರು ಅಂದುಕೊಂಡಿಲ್ಲ. ಅವರೊಬ್ಬ ಮಹಾನ್ ನಾಯಕ. ಅತ್ಯಂತ ಕಷ್ಟ ಕಾಲದಲ್ಲಿ ಗಡಿಯಲ್ಲಿ ಭದ್ರತೆ ಮತ್ತು ಆಂತರಿಕ ಸುರಕ್ಷತೆ ಸುಭದ್ರತೆ ಹೆಚ್ಚಿಸಿದ ಆಪತ್ಬಾಂಧವ ಎಂದು ಹೇಳಿದರು.
ರಾಜ್ಯದಲ್ಲಿ ಮೋದಿ ಸುನಾಮಿ ಎದ್ದಿದೆ. ಅವರು ರಾಜ್ಯದ ಹಲವೆಡೆ ಪ್ರಚಾರ ಮಾಡಿರುವುದರಿಂದ ಬಿಜೆಪಿ ಪರ ಒಲವು ಹೆಚ್ಚಾಗಿದೆ ಎಂದರು.
ಹೆಸ್ಕಾಂ ಮತ್ತು ಕೆಪಿಟಿಸಿಎಲ್ ಮುಷ್ಕರ ಕುರಿತು ಮಾತನಾಡಿದ ಅವರು, ಇಂಧನ ಸಚಿವರು ನೌಕರರ ಸಂಘ ಮತ್ತು ಒಕ್ಕೂಟದ ಸಂಪರ್ಕದಲ್ಲಿದ್ದು, ಈಗಾಗಲೇ ಎರಡು ಸುತ್ತಿನ ಮಾತುಕತೆ ನಡೆಸಿದ್ದಾರೆ. ಕೂಡಲೇ ಅವರ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.