ಮನೆ ರಾಜಕೀಯ ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

0

ಮಂಡ್ಯ: ಮೇಲುಕೋಟೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ವೈರಮುಡಿ ಉತ್ಸವದಲ್ಲಿ ಭಾಗಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇದೇ ಮೊದಲ ಬಾರಿಗೆ ವೈರಮುಡಿ ಉತ್ಸವದಲ್ಲಿ ಭಾಗಿಯಾಗಿರುವುದು ಸಂತೋಷ ತಂದಿದೆ. ರಾಜ್ಯಕ್ಕೆ ಒಳಿತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

ಮಂಡ್ಯ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಜನರಿಗೆ ಸಾಕಷ್ಟು ನಿರೀಕ್ಷೆ ಇದೆ. ಆ ಎಲ್ಲವನ್ನೂ ಪೂರೈಸುತ್ತೇವೆ. ಜಿಲ್ಲೆಯ ‌ಜನರ ಜೀವನಾಡಿಮೈಶುಗರ್ ಪುನರಾರಂಭಕ್ಕೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದರು.

ಹಿಜಾಬ್ ಕುರಿತು ಇಂದು ಹೈ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆಗೆ ಧಕ್ಕೆ ಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಉಪಸ್ಥಿತರಿದ್ದರು.