ಹಾವೇರಿ: ಬಿಎಸ್ ಯಡಿಯೂರಪ್ಪ ಅವರು ಮೌನವಾಗಿರುವುದನ್ನು ದೌರ್ಬಲ್ಯ ಅಂದುಕೊಳ್ಳಬೇಡಿ. ಇಲ್ಲವಾದರೆ ಮುಂದೆ ಬಹಳ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
ಇಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ನಡೆದ ಯುವ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಡಿಪಾಯ ಗಟ್ಟಿ ಇದೆ ಅಂದರೆ ಅದಕ್ಕೆ ಕಾರಣ ಯಡಿಯೂರಪ್ಪ. ಆದರೆ, ಅವರನ್ನು ಟೀಕೆ ಮಾಡುವಾಗ ಎಚ್ಚರಿಕೆ ಇರಬೇಕು. ಅವರು ತಮ್ಮ ಕುಟುಂಬ ಬೆಳೆಸಬೇಕು ಅಂತ ರಾಜಕಾರಣ ಮಾಡಿಲ್ಲ ಎಂದರು.
ಯಡಿಯೂರಪ್ಪ ಅವರು ಈಗ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತಿಲ್ಲ. ಅವರಿಗೆ ಯಾವುದೇ ದೊಡ್ಡ ಸ್ಥಾನಮಾನ ಇಲ್ಲದಿದ್ದರೂ ಸಹ ಅವರಿಗೆ ಆರೂವರೆ ಕೋಟಿ ಕನ್ನಡಿಗರು ತಮ್ಮ ಹೃದಯದಲ್ಲಿ ಶಾಶ್ವತ ಸ್ಥಾನ ಕೊಟ್ಟಿದ್ದಾರೆ ಎಂದು ಹೇಳಿದರು.
ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಆಗಬೇಕಿದೆ. ಈ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಾ ಇದ್ದೇವೆ ಎಂದು ತಿಳಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.