ಮೈಸೂರು: ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಆದ ಡಾ.ಕೆ.ವಿ.ರಾಜೇಂದ್ರ ಅವರು ಇಂದು ನಗರದ ಮಹಾರಾಣಿ ಕಾಲೇಜಿಗೆ ಭೇಟಿ ನೀಡಿ, ಮುಂಬರುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರ ಭದ್ರತಾ ಕೊಠಡಿ ಸೇರಿದಂತೆ ವಿವಿಧ ಕೊಠಡಿಗಳ ಕುರಿತ ಪರಿಶೀಲನೆ ನಡೆಸಿದರು.
ಜಿಲ್ಲೆಯ ಎಲ್ಲಾ ಹನ್ನೊಂದು ವಿಧಾನಸಭಾ ಕ್ಷೇತ್ರಗಳ ವಿದ್ಯುನ್ಮಾನ ಮತಯಂತ್ರಗಳ ದಾಸ್ತಾನು ಕೊಠಡಿ, ಮತ ಎಣಿಕೆ ಕೊಠಡಿ ಮತ್ತು ಭದ್ರತಾ ಕೊಠಡಿಗಳನ್ನು ಸ್ಥಾಪಿಸುವ ಕುರಿತು ನಗರ ಪೋಲಿಸ್ ಆಯುಕ್ತರಾದ ರಮೇಶ್ ಬಾನೊತ್ ಅವರೊಂದಿಗೆ ಜಿಲ್ಲಾಧಿಕಾರಿಗಳು ಚರ್ಚೆ ನಡೆಸಿದರು.
ಮಾಧ್ಯಮ ಕೊಠಡಿ, ಪೊಲೀಸ್ ಕಂಟ್ರೋಲ್ ರೂಂ, ಗಣಕ ಯಂತ್ರ, ಇಂಟರ್ನೆಟ್ ಸಂಪರ್ಕ ವ್ಯವಸ್ಥೆ, ಭದ್ರತಾ ವ್ಯವಸ್ಥೆ, ಸ್ಡ್ರಾಂಗ್ ರೂಂ ವಿವಿಧ ಕೊಠಡಿಗಳ ಸ್ಥಾಪಿಸುವ ಹಾಗೂ ಪಾರ್ಕಿಂಗ್ ವ್ಯವಸ್ಥೆಯ ಕುರಿತು ಸ್ಥಳ ವೀಕ್ಷಣೆ ಮಾಡಿ, ಅಗತ್ಯ ಎಲ್ಲಾ ವ್ಯವಸ್ಥೆಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್, ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಾದ ದಿನೇಶ್ ಕುಮಾರ್, ಸಂಚಾರ ಹಾಗೂ ಅಪರಾದ ವಿಭಾಗದ ಪೊಲೀಸ್ ಉಪ ಆಯುಕ್ತರಾದ ಜಾಹ್ನವಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಧಿತರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.