ಮನೆ ರಾಷ್ಟ್ರೀಯ ಅರುಣಾಚಲ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ

ಅರುಣಾಚಲ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ

0

ನವದೆಹಲಿ: ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಗುರುವಾರ ಪತನಗೊಂಡಿದೆ.

ಬೊಮ್ಡಿಲಾ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ 9.15ರ ಸುಮಾರಿಗೆ ಪತನಗೊಂಡಿದ್ದು, ಎಟಿಸಿ ಸಂಪರ್ಕ ಕಳೆದುಕೊಂಡಿದೆ.

ಘಟನಾ ಸ್ಥಳದಲ್ಲಿ ಪೈಲಟ್‌’ಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.