ಮನೆ ಉದ್ಯೋಗ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ

0

 ಮೈಸೂರು: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 9 ಶಿಶು ಅಭಿವೃದ್ಧಿ ಯೋಜನೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 83 ಅಂಗನವಾಡಿ ಕಾರ್ಯಕರ್ತೆ, 14 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 153 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಗೌರವ ಸೇವೆಯ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರಿoದ ಆಫ್‌ಲೈನ್‌ನಲ್ಲಿ (ನಮೂನೆಯಲ್ಲಿ) ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಮಾ. 18 ರಂದು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಏಪ್ರಿಲ್ 14 ರಂದು ಅರ್ಜಿ ಸಲ್ಲಿಸಲು ಕಡೆಯ ದಿನವಾಗಿರುತ್ತದೆ.

 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ P.U.C. ತೇರ್ಗಡೆ ಹೊಂದಿರಬೇಕು ಹಾಗೂ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಜೊತೆಗೆ ಆದ್ಯತೆಯಾಗಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ “ಸರ್ಕಾರದ ಅಂಗೀಕೃತ ಸಂಸ್ಥೆಗಳಿoದ ಅಥವಾ D.S.E.R.T ಯಿಂದ ECCE

 ಡಿಪ್ಲೊಮಾ ಕೋರ್ಸ್, JOC ಕೋರ್ಸ್, N.T.T. ಕೋರ್ಸ್ಗಳನ್ನು ಹಾಗೂ ಅಂಗನವಾಡಿ ಚಟುವಟಿಕೆಗಳಿಗೆ ಸಂಬoಧಿಸಿದoತೆ ಡಿಪ್ಲೊಮಾ ನ್ಯೂಟ್ರಿಷಿಯನ್, ಹೋಂ ಸೈನ್ಸ್ ಸರ್ಟಿಫಿಕೇಟ್ ಕೋರ್ಸ್, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

 ಅಂಗನವಾಡಿ ಸಹಾಯಕಿ ಹುದ್ದೆಗೆ SSLC ಅಥವಾ ತತ್ಸಮಾನ 10ನೇ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು. ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ/ಮುಕ್ತ ವಿದ್ಯಾಲಯಗಳಲ್ಲಿ SSLC ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಪ್ರಥಮ/ ದ್ವಿತೀಯ ಭಾಷೆಯಾಗಿ ಕನ್ನಡ ಹಾಗೂ ಸಾಮಾನ್ಯ ಗಣಿತ ಮತ್ತು ಸಮಾಜ ಶಾಸ್ತ್ರ/ಸಮಾಜ ವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿದ್ದು, ಪ್ರಮಾಣ ಪತ್ರ/ಅಂಕಪಟ್ಟಿಯು ಗರಿಷ್ಟ 625 ಕನಿಷ್ಠ 219 ಅಂಕಗಳನ್ನು ಹೊಂದಿದ್ದಲ್ಲಿ ಅಂತಹ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು.

 ಹೆಚ್ಚಿನ ವಿವರಗಳಿಗೆ ಸಂಬoಧಪಟ್ಟ ಕಾರ್ಯಕರ್ತೆ/ಸಹಾಯಕಿಯರ ಸದಸ್ಯ ಆಯ್ಕೆ ಸಮಿತಿಯ ಯೋಜನಾಧಿಕಾರಿಗಳನ್ನು ಕಛೇರಿಯ ವೇಳೆಯಲ್ಲಿ ಸಂಪರ್ಕಿಸಬಹುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.