ಮನೆ ಆರೋಗ್ಯ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 129 ಮಂದಿಗೆ ಪಾಸಿಟಿವ್

ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 129 ಮಂದಿಗೆ ಪಾಸಿಟಿವ್

0

ಬೆಂಗಳೂರುರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 129 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,43,912ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 40,024 ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 101 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,80,498ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾಗೆ ಒಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 206 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,01,636ಕ್ಕೆ ಏರಿಕೆಯಾಗಿದೆ. ಇನ್ನು 2,341 ಸಕ್ರಿಯ ಪ್ರಕರಣಗಳಿವೆ.