ಚಾಯ್‌ಬಾಸ: ರೈಲ್ವೆಯಲ್ಲಿ ಅನುಕಂಪದ ಉದ್ಯೋಗ ಗಿಟ್ಟಿಸಿಕೊಳ್ಳಲು ಪತಿಯನ್ನು ಹತ್ಯೆ ಮಾಡಿದ ಪತ್ನಿಗೆ ಜಾರ್ಖಾಂಡ್’ನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಅನಿತಾ ಕುಮಾರಿ ಅಲಿಯಾಸ್ ಅನಿತಾ ಸಿಂಗ್ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿ.
ರೈಲ್ವೆಯಲ್ಲಿ ಉದ್ಯೋಗಿಯಾಗಿದ್ದ ತಮ್ಮ ಪತಿ ರಾಜೀವ್ ಕುಮಾರ್ ಸಿಂಗ್ ಎಂಬವರನ್ನು 2017ರ ಜನವರಿ 25 ರಂದು ಕೊಲೆ ಮಾಡಿದ್ದರು. ಅನುಕಂಪದ ಆಧಾರದಲ್ಲಿ ಪತಿಯ ನೌಕರಿ ತನಗೆ ಸಿಗಲಿದೆ ಎನ್ನುವ ಕಾರಣಕ್ಕೆ ಕೃತ್ಯ ಎಸಗಿದ್ದರು.
ಕೊಲೆ ಮಾಡಿದ ಬಳಿಕ ಮೃತದೇಹವನ್ನು ಸೀಲಿಂಗ್ ಫ್ಯಾನ್‌ಗೆ ನೇತು ಹಾಕಿದ್ದರು. ಪ್ರಕರಣದಲ್ಲಿ ಅನಿತಾ ಪಾತ್ರವಿರುವುದು ತನಿಖೆಯಲ್ಲಿ ಗೊತ್ತಾದ ಬಳಿಕ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.
2007ರಲ್ಲಿ ರಾಜೀವ್ – ಅನಿತಾ ಅವರ ವಿವಾಹ ನಡೆದಿತ್ತು. ಆದರೆ ಅವರಿಬ್ಬರ ನಡುವಿನ ಸಂಬಂಧ ಚೆನ್ನಾಗಿರಲಿಲ್ಲ. ಹೀಗಾಗಿ ಬೇರೆ ಬೇರೆಯಾಗಿ ವಾಸ ಮಾಡುತ್ತಿದ್ದರು. ಈ ನಡುವೆ 2013ರಲ್ಲಿ ರಾಜೀವ್ ಅವರಿಗೆ ರೈಲ್ವೆಯಲ್ಲಿ ಡಿ ಗ್ರೂಪ್ ನೌಕರನಾಗಿ ನೌಕರಿ ಲಭಿಸಿತ್ತು. ಹೀಗಾಗಿ ಅನಿತಾ ಮತ್ತೆ ತಮ್ಮ ಪತಿ ಬಳಿ ಬಂದಿದ್ದರು.
ರೈಲ್ವೆಯ ಕ್ವಾಟ್ರಸ್’ನಲ್ಲಿ ತನ್ನ ಮಗಳೊಂದಿಗೆ ದಂಪತಿ ವಾಸವಾಗಿದ್ದರು. ಇಲ್ಲಿಯೇ ಅನಿತಾ ಪತಿಯನ್ನು ಕೊಲೆ ಮಾಡಿ ಸೀಲಿಂಗ್ ಫ್ಯಾನ್’ಗೆ ತೂಗು ಹಾಕಿದ್ದರು.
ಸುದೀರ್ಘ ತನಿಖೆ ಬಳಿಕ ಇದೀಗ ಅನಿತಾ ಅವರ ಮೇಲಿದ್ದ ಆರೋಪ ಸಾಬೀತಾಗಿದ್ದು, ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯದ ನ್ಯಾಯಮೂರ್ತಿ ವಿಶ್ವನಾಥ್ ಶುಕ್ಲಾ ಅನಿತಾಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಜತೆಗೆ ₹10,000 ದಂಡವನ್ನೂ ವಿಧಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.