ಕಲಬುರಗಿ: ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್)ಯ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ 36 ವರ್ಷದ ಮಹಿಳೆ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ನಗರದ ಇಸ್ಲಾಮಾಬಾದ್ ಕಾಲೊನಿ ನಿವಾಸಿ ಮೆಹಬೂಬ್ ಪಾಷಾ (40) ಕೃತ್ಯ ಎಸಗಿದ ಆರೋಪಿ.
ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಅಲ್ಲಿದ್ದ ವ್ಯಕ್ತಿಯೊಬ್ಬರು ಅತ್ಯಾಚಾರದ ದೃಶ್ಯಗಳನ್ನು ಚಿತ್ರೀಕರಿಸಿದ್ದು, ಇದರ ಆಧಾರದ ಮೇಲೆ ಬ್ರಹ್ಮಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಶುಕ್ರವಾರ ರಾತ್ರಿ ಎಂಟು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಅತ್ಯಾಚಾರಕ್ಕೆ ಒಳಗಾದ ಮಹಿಳೆ ಕಳೆದ ಆರು ತಿಂಗಳಿಂದ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಕಲಬುರಗಿ ಪೊಲೀಸ್ ಕಮಿಷನರ್ ಚೇತನ್ ಆರ್., ಅತ್ಯಾಚಾರ ನಡೆದ ಬಗ್ಗೆ ಜಿಮ್ಸ್ ಸ್ಟಾಫ್ ನರ್ಸ್ ಅಕ್ಕಮಹಾದೇವಿ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಆರೋಪಿ ಅಲ್ಲಿಗೆ ಏಕೆ ಬಂದಿದ್ದ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.
ಆಸ್ಪತ್ರೆಯಲ್ಲಿ ಭದ್ರತಾ ಲೋಪ ಆಗಿರುವ ಬಗ್ಗೆ ಹಾಗೂ ಡ್ಯೂಟಿಯಲ್ಲಿ ಯಾವ ವೈದ್ಯರಿದ್ದರು ಎಂಬ ಬಗ್ಗೆ ವಿಚಾರಣೆ ನಡೆಸಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
ಸುನಿತಾ ಜೊತೆ ಗಗನಕ್ಕೇರಿದ ಭಗವದ್ಗೀತೆ, ಗಣೇಶ ಮೂರ್ತಿ..!
ಮೈಸೂರಿನ ಹೆಬ್ಬಾಳ್ ಕೆರೆಯಲ್ಲಿ ಮೀನುಗಳ ಮಾರಣಹೋಮ….
ಸುಳ್ಳು ಮಾಹಿತಿಯನ್ನ ಸ್ಪಷ್ಟಪಡಿಸಿದ ಆರೋಗ್ಯ ಇಲಾಖೆ..
ಹನುಮ ಕೇಸರಿಯಾದ ಕಥೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.