ಮನೆ ಹವಮಾನ ಕಲಬುರಗಿ, ಬೀದರ್ ನಲ್ಲಿ ಆಲಿಕಲ್ಲು ಸಹಿತ ಮಳೆ

ಕಲಬುರಗಿ, ಬೀದರ್ ನಲ್ಲಿ ಆಲಿಕಲ್ಲು ಸಹಿತ ಮಳೆ

0

ಕಲಬುರಗಿ: ಕಲಬುರಗಿ ಮತ್ತು ಬೀದರ್‌ ಜಿಲ್ಲೆಯ ವಿವಿಧೆಡೆ ಶನಿವಾರ ಆಲಿಕಲ್ಲು ಸಹಿತ ಮಳೆಯಾಗಿದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ನರನಾಳ, ನಾಗರಾಳ, ಚಿಮ್ಮನಚೋಡ, ಹಸರಗುಂಡಗಿ, ಗುರಂಪಳ್ಳಿ, ಸಾಲೇಬೀರನಹಳ್ಳಿ, ಮರಪಳ್ಳಿ, ಯಂಪಳ್ಳಿ , ತುಮಕುಂಟಾ, ಕೊಳ್ಳೂರ ಹಾಗೂ ಚಂದ್ರಂಪಳ್ಳಿ ಗ್ರಾಮಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ.

ಆಳಂದ ಮತ್ತು ಸೇಡಂ ತಾಲ್ಲೂಕಿನ ವಿವಿಧೆಡೆ ಮಳೆಯಾಗಿದೆ. ಶುಕ್ರವಾರ ಮಧ್ಯರಾತ್ರಿ ಕಲಬುರಗಿ ನಗರ ಸೇರಿ ಜಿಲ್ಲೆಯ ವಿವಿಧೆಡೆ ಆಲಿಕಲ್ಲು ಸಹಿತ ಮಳೆಯಾಯಿತು. ಶನಿವಾರ ಮಧ್ಯಾಹ್ನದಿಂದ ಕಲಬುರಗಿಯಲ್ಲಿ ಮೋಡ ಕವಿದ ವಾತಾವರಣವಿದೆ.

ಬೀದರ್ ಜಿಲ್ಲೆಯ ಹುಲಸೂರು, ಬಸವಕಲ್ಯಾಣದಲ್ಲಿ ಮಳೆಯಾಗಿದೆ. ಯಾದಗಿರಿ ನಗರ ಸೇರಿ ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ ಮಳೆಯಾಗಿದೆ.