ಮುಂಬೈ: ವಾಕಿಂಗ್ ಹೋಗಿದ್ದಾಗ ವೇಗವಾಗಿ ಬಂದ ಎಸ್’ಯುವಿ ಕಾರು ಡಿಕ್ಕಿ ಹೊಡೆದು ಪರಿಣಾಮ 39 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.
ಭಾನುವಾರ ಬೆಳಿಗ್ಗೆ 6.30ರ ಸುಮಾರಿಗೆ ವರ್ಲಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ರಾಜಲಕ್ಷ್ಮಿ ರಾಜಕೃಷ್ಣನ್ ಎಂಬುವರಿಗೆ ಕಾರು ಡಿಕ್ಕಿಯಾಗಿತ್ತು. ಅಪಘಾತದ ರಭಸಕ್ಕೆ ರಾಜಲಕ್ಷ್ಮಿ ಹಲವಾರು ಅಡಿಗಳ ದೂರಕ್ಕೆ ಹಾರಿ ಬಿದ್ದಿದ್ದರು. ಈ ವೇಳೆ ತಲೆಗೆ ತೀವ್ರ ಗಾಯ ಮೃತಪಟ್ಟಿದ್ದಾರೆ.
ಹಿಂಬದಿಯಿಂದ ವೇಗವಾಗಿ ಬಂದ ಎಸ್’ಯುವಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ರಾಜಲಕ್ಷ್ಮಿಗೆ ಡಿಕ್ಕಿ ಹೊಡೆದಿತ್ತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ಕಾರು ಚಾಲಕನನ್ನು 23 ವರ್ಷದ ಸುಮರ್ ಮರ್ಚೆಂಟ್ ಎಂದು ಗುರುತಿಸಲಾಗಿದ್ದು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಭಾರತೀಯ ದಂಡ ಸಂಹಿತೆ ಮತ್ತು ಮೋಟಾರು ವಾಹನಗಳ ಕಾಯಿದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಮರ್ಚೆಂಟ್ ವಿರುದ್ಧ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.