ಬಾಗಲಕೋಟೆ: ಪಂಚಮಸಾಲಿ ಮೀಸಲಾತಿ ವಿಷಯದಲ್ಲಿ ಕಾಂಗ್ರೆಸ್ ನವರು ಅನಾವಶ್ಯಕ ಗೊಂದಲ ಉಂಟುಮಾಡುತ್ತಿದ್ದಾರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.
ಮಂಗಳವಾರ ಹುನಗುಂದದಲ್ಲಿ ಮೀಸಲಾತಿ ಬಗ್ಗೆ ಕೇಳಿದ ಪ್ರಶ್ನೆಗೆ ಸುದ್ದಿಗೋಷ್ಠಿಯಲ್ಲಿ ಉತ್ತರಿಸಿದ ಅವರು, ಮೀಸಲಾತಿ ಬಗ್ಗೆ ಸಂಪುಟದಲ್ಲಿ ಚರ್ಚಿಸಿ, ನಂತರ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.
ಭರವಸೆಗಳು ಮಾತನಾಡಬಾರದು. ಕೆಲಸಗಳು ಮಾತನಾಡಬೇಕು. ಬೋಗಸ್ ಗ್ಯಾರಂಟಿ ಕಾರ್ಡ್ ನೀಡಿ ಜನರಿಗೆ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ರಾಜಸ್ಥಾನ, ಛತ್ತೀಸಗಡದಲ್ಲಿ ನಿರುದ್ಯೋಗ ಭತ್ಯೆ ನೀಡುವುದಾಗಿ ಭರವಸೆ ನೀಡಲಾಗಿತ್ತು. ಇಲ್ಲಿಯವರೆಗೆ ಈಡೇರಿಸಿಲ್ಲ. ಕರ್ನಾಟಕದ ಜನರು ಪ್ರಬುದ್ಧರಿದ್ದಾರೆ ಎಂದರು.
ಹಲಕುರ್ಕಿ ರೈತರ ಭೂಸ್ವಾಧೀನ ಕುರಿತು ಪ್ರತಿಕ್ರಿಯಿಸಿ, ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದರು.