ಮನೆ ರಾಜಕೀಯ ನಾಳೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಡಿ.ಕೆ.ಶಿವಕುಮಾರ್

ನಾಳೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಡಿ.ಕೆ.ಶಿವಕುಮಾರ್

0

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ನಾಳೆ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಟಿಕೆಟ್ ಘೋಷಣೆಗೂ ಮುನ್ನ ಮಂಡ್ಯದ  ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ತೆರಳಿ ಮಂಗಳವಾರ ಕಾಲಭೈರವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಭೇಟಿ ನೀಡಿ ದೆಹಲಿಗೆ ವಾಪಸ್ ಆದ ಮೇಲೆ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿತ್ತು. ಅದರಂತೆ ನಾಳೆ ಅಂದರೆ ಯುಗಾದಿ ದಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರ ಗೊತ್ತಿಲ್ಲ. ನಾನು ಯಾರಿಗೂ ಪೊಲಿಟಿಕಲಿ ಡ್ಯಾಮೇಜ್ ಮಾಡಲ್ಲ. ಈ ಬಗ್ಗೆ ನಾರಾಯಣಗೌಡರನ್ನೇ ಕೇಳಬೇಕು ಎಂದು ಸ್ಪಷ್ಟಪಡಿಸಿದರು.